LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಲ್ಲು ಅರ್ಜುನ್ ‘ರಾಕಾ’ ಚಿತ್ರದಲ್ಲಿ ಜಾನ್ವಿ ಕಪೂರ್: ಬುಡಕಟ್ಟು ರಾಣಿಯ ಅವತಾರದಲ್ಲಿ ಮಿಂಚಲಿದ್ದಾರಾ ಬಾಲಿವುಡ್ ಬೆಡಗಿ?

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಮುಂಬರುವ ಬಹುನಿರೀಕ್ಷಿತ ಸಿನಿಮಾ ರಾಕಾ ಸದ್ಯ ಭಾರಿ ಕುತೂಹಲ ಮೂಡಿಸುತ್ತಿದೆ. ಖ್ಯಾತ ನಿರ್ದೇಶಕ ಅಟ್ಲಿ ನಿರ್ದೇಶನದಲ್ಲಿ ಅತ್ಯಂತ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರವನ್ನು ಸನ್ ಪಿಕ್ಚರ್ಸ್ ಸಂಸ್ಥೆ ನಿರ್ಮಿಸುತ್ತಿದೆ.

ಈ ಸಿನಿಮಾದ ನಟ-ನಟಿಯರ ಆಯ್ಕೆಯ ಕುರಿತು ದಿನಕ್ಕೊಂದು ಹೊಸ ಸುದ್ದಿಗಳು ಹರಿದಾಡುತ್ತಿವೆ. ಈಗಾಗಲೇ ದೀಪಿಕಾ ಪಡುಕೋಣೆ ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ, ಜಾನ್ವಿ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಕೂಡ ಅಭಿನಯಿಸಲಿದ್ದಾರೆ ಎಂಬ ಚರ್ಚೆ ಗಾಂಧಿನಗರದಲ್ಲಿ ನಡೆಯುತ್ತಿದೆ. ಆದರೆ ಈವರೆಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲವಾದರೂ, ಜಾನ್ವಿ ಅವರ ಪಾತ್ರದ ಕುರಿತು ಹರಿದಾಡುತ್ತಿರುವ ಹೊಸ ವಿಷಯವೊಂದು ಅಭಿಮಾನಿಗಳ ನಿದ್ದೆಗೆಡಿಸಿದೆ.

ತಾಜಾ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಜಾನ್ವಿ ಕಪೂರ್ ಅವರು ಬುಡಕಟ್ಟು ಜನಾಂಗದ ರಾಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಕಥೆಗೆ ಅತ್ಯಂತ ಪ್ರಮುಖ ತಿರುವು ನೀಡುವ ಸಾಮರ್ಥ್ಯ ಈ ಪಾತ್ರಕ್ಕಿದ್ದು, ಅವರ ಅಭಿನಯ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಸದ್ಯ ಈ ಸಿನಿಮಾದ ಚಿತ್ರೀಕರಣವು ಮುಂಬೈನಲ್ಲಿ ನಿರ್ಮಿಸಲಾಗಿರುವ ಬೃಹತ್ ಸೆಟ್‌ಗಳಲ್ಲಿ ಭರದಿಂದ ಸಾಗುತ್ತಿದೆ. ಸಾಯಿ ಅಭ್ಯಂಕರ್ ಸಂಗೀತ ನಿರ್ದೇಶನ ಮಾಡುತ್ತಿರುವ ಈ ಬಿಗ್ ಬಜೆಟ್ ಸಿನಿಮಾ 2027 ರಲ್ಲಿ ಬೆಳ್ಳಿಪರದೆಗೆ ಬರಲು ಸಜ್ಜಾಗುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?