LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೈಲಿನಲ್ಲಿ ಪ್ರಜ್ವಲ್ ಮೊಬೈಲ್ ಬಳಕೆ: ಹೆಚ್.ಡಿ.ರೇವಣ್ಣ ಹೇಳಿದ್ದೇನು?

ಬೆಂಗಳೂರು: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್ ನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಅಲ್ಲದೇ ಸಿಸಿಬಿ ಪೊಲೀಸರು ಜೈಲಿನ ಮೇಲೆ ದಾಳಿ ಅನ್ಡೆಸಿದಾಗ ಪ್ರಜ್ವಲ್ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆಯಾಗಿದೆ. ಈ ಪ್ರಕರಣ ಸಂಬಂಧ ಪ್ರಜ್ವಲ್ ತಂದೆ, ಶಾಸಕ ಹೆಚ್.ಡಿ.ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಜೈಲಿನ ಮೇಲೆ ಸಿಸಿಬಿ ದಾಳಿ ನಾನೇ ನಡೆಸಿದ್ದು ಎಂದು ಹೇಳಿದ್ದಾರೆ. ಆದ್ದರಿಂದ ಅವರದೇ ಸರ್ಕಾರವಿದೆ. ತನಿಖೆ ಮಾಡಿಸಲಿ ಎಂದರು.

ನಾನೇ ಜೈಲಿನ ಮೇಲೆ ರೇಡ್ ಮಾಡಿಸಿದ್ದೇನೆ ಎಂದು ಗೃಹ ಮಂತ್ರಿಗಳು ಹೇಳಿದ್ದಾರೆ. ಅವರದ್ದೇ ಸರ್ಕಾರ ರಾಜ್ಯದಲ್ಲಿದೆ. ಅವರದ್ದೇ ಗೃಹ ಇಲಾಖೆ ಇದೆ. ಏನು ತನಿಖೆ ಮಾಡೊಸಬೇಕು ಮಾಡಿಸಲಿ. ತನಿಖೆ ನಡೆಸಲಿ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ VVIP ಸೆಲ್ ನಿಂದ ಶಿಫ್ಟ್: ಜನರಲ್ ಸೆಲ್ ಗೆ ಸ್ಥಳಾಂತರ:

ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆಗಿದೆ. ಅಲ್ಲದೇ ಸಿಸಿಬಿ ಪೊಲೀಸರು ನಡೆಸಿದ ದಾಳಿ ವೇಳೆ ಪ್ರಜ್ವಲ್ ರೇವಣ್ಣ ಇರುವ ವಿವಿಐಪಿ ಸೆಲ್ ನಲ್ಲಿ ಮೊಬೈಲ್ ಕೂಡ ಪತ್ತೆಯಾಗಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ ಪ್ರಕರಣದ ತನಿಖೆಗೆ ಡಿಐಜಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಘಟನೆ ಬೆನ್ನಲ್ಲೇ ಪ್ರಜ್ವಲ್ ರೇವಣ್ಣನನ್ನು ವಿವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳಿರುವ ಜನರಲ್ ಸೆಲ್ ಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದುಬಂದಿದೆ.

20 ಕೈದಿಗಳಿರುವ ಬ್ಯಾರಕ್‌ಗೆ ಪ್ರಜ್ವಲ್‌ ರೇವಣ್ಣನನ್ನ ಶಿಫ್ಟ್‌ ಮಾಡಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಇರಿಸಲಾಗಿದೆ. ಪ್ರಜ್ವಲ್ ರೇವಣ್ಣ ಇದ್ದ ಸೆಲ್ ಗೆ ಮೊಬೈಲ್ ಬಂದಿದ್ದು ಹೇಗೆ? ತಂದು ಕೊಟ್ಟಿದ್ದು ಯಾರು? ಎಂಬ ಬಗ್ಗೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಮಾತ್ರವಲ್ಲ ನೋಟ್ ಬುಕ್ ಕೂಡ ಪತ್ತೆಯಾಗಿದೆ. ನೋಟ್ ಬುಕ್ ನಲ್ಲಿ ತಂದೆ, ತಾಯಿ ಹಾಗೂ ತನ್ನ ಗೆಳತಿಯ ಫೋನ್ ನಂಬರ್ ಗಳನ್ನು ಬೇರೆ ಹೆಸರಿನಲ್ಲಿ ಯಾರುಗೂ ಗೊತಾಗದಂತೆ ಬರೆದಿಟ್ಟಿದ್ದಾರೆ. ತಂದೆಯ ಫೋನ್ ನಂಬರ್ ನ್ನು ಶಿವಪ್ಪ ಹೆಸರಲ್ಲಿ, ತಾಯಿ ಫೋನ್ ನಂಬರ್ ನ್ನು ಪಾರ್ವತಿ ಹೆಸರಿನಲ್ಲಿ ಬರೆದಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್‌ನಲ್ಲಿ ಸುಮಾರು 90 ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಪ್ರಜ್ವಲ್ ಪರಿಚಿತರೊಂದಿಗೆ ಮಾತನಾಡಿದ ಆಡೀಯೋ ರೆಕಾರ್ಡ್ ಸಹ ಸಿಕ್ಕಿದೆ. ಜೈಲಿನಲ್ಲಿ ಸಿಕ್ಕ ಮೊಬೈಲ್ ಮೂಲಕ ಪ್ರಜ್ವಲ್ ರೇವಣ್ಣ ಅಪರಿಚಿತ ವ್ಯಕ್ತಿಯೊಂದಿಗಿನ ಸಂಭಾಷಣೆ ಸಿಕ್ಕಿದೆ. ಅಲ್ಲದೇ ಪ್ರಜ್ವಲ್ ರೇವಣ್ಣ ಜೈಲಿನ ಕೊಠಡಿಯೊಳಗೆ ಜೈಲು ಸಮವಸ್ತ್ರ ಬಿಟ್ಟು, ಸಾಮಾನ್ಯ ಜನರಂತೆ ಉಡುಪು ಧರಿಸಿ, ಆರಾಮವಾಗಿ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋ ಯಾವಾಗ, ಯಾರು ಚಿತ್ರೀಕರಿಸಿದ್ದಾರೆ ಎಂಬುದು ತನಿಖೆಯಿಂದಷ್ಟೇ ಹೊರಬರಬೇಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!