ಧಾರವಾಡ : 2026-27 ನೇ ಸಾಲಿನ ಅಲ್ಪಸಂಖ್ಯಾತ ಸಮುದಾಯದ ಪಿ.ಎಚ್.ಡಿ, ಎಂ.ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಫ್ ನೀಡಲು ಸೇವಾ ಸಿಂಧು ಆನ್ಲೈನ್ (https://sevasindhu.karnataka.gov.in)ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅಕ್ಟೋಬರ್ 31, 2026 ರೊಳಗಾಗಿ ಅರ್ಜಿ ಸಲ್ಲಿಸಿ, ಹಾರ್ಡ ಪ್ರತಿಯನ್ನು ಜಿಲ್ಲಾ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ:0836-2971590, 9738287549 ಗೆ ಮತ್ತು ಸಹಾಯವಾಣಿ (24*7) 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಕಲಚೇತನ ಉದ್ಯೋಗಸ್ಥ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ಪ್ರಾರಂಭ
ಧಾರವಾಡ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಡಿ ವಿಕಲಚೇತನ ಉದ್ಯೋಗಸ್ಥ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ವಸತಿ ನಿಲಯವನ್ನು ವಿಶ್ವಧರ್ಮ ಮಹಿಳಾ ಮತ್ತು ಮಕ್ಕಳ ಶಿಕ್ಷಣ ಸೇವಾಶ್ರಮ ಸಮಿತಿ ಸಂಸ್ಥೆಯವರು ವಿದ್ಯಾನಗರ ಹುಬ್ಬಳ್ಳಿಯಲ್ಲಿ ನಡೆಸಲಾಗುತ್ತಿದೆ.
ಜಿಲ್ಲೆಯಲ್ಲಿ ವಿಕಲಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಗಂಗಾಧರ ಲಕ್ಕುಂಡಿ (6364673577) ಹಾಗೂ ಕಚೇರಿ ದೂರವಾಣಿ ಸಂಖ್ಯೆ: 0836-2744474 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.