LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿಗೆ ಹೋಗಿ ಬರುತ್ತೇವೆಂದು ಹೊರಟ ದಂಪತಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ

ದಾವಣಗೆರೆ: ದಾವಣಗೆರೆಯಿಂದ ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಪೋಷಕರಿಗೆ ಹೇಳಿ ಹೊರಟಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದು, ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ಇದರಿಂದ ಆತಂಕಗೊಂಡಿರುವ ಕುಟುಂಬ ಸದಸ್ಯರು ಪೊಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯಲ್ಲಿ ವಾಸವಾಗಿದ್ದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) ನಾಪತ್ತೆಯಾದವರು. ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದವರಾದ ರಮೇಶ್ ಕುಮಾರ್ ಷೇರು ಮಾರುಕಟ್ಟೆ ಹೂಡಿಕೆ ವ್ಯವಹಾರ ನಡೆಸುತ್ತಿದ್ದರು.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನಿಟ್ಟಿನಲ್ಲಿ ಹಲವರಿಂದ ಹಣ ಸಂಗ್ರಹಿಸಿ ಹೂಡಿಕೆ ಮಾಡಿದ್ದರು. ಆದರೆ ಕೆಲ ತಿಂಗಳಿಂದ ಷೇರುಮಾರುಕಟ್ಟೆ ಹೂಡಿಕೆಯಲ್ಲಿ ಭಾರಿ ನಷ್ಟ ಅನುಭವಿಸಿದ್ದರು ಎನ್ನಲಾಗಿದೆ. ಇದೀಗ ಕುಟುಂಬ ಸಮೇತ ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಹೇಳಿ ಹೋದವರು ಮನೆಗೆ ವಾಪಾಸ್ ಆಗಿಲ್ಲ. ರಮೇಶ್ ಅವರ ಪೋಷಕರು ಹಾಗೂ ಸಂಬಂಧಿಕರು ಬೆಂಗಳೂರು ಸೇರಿದಂತೆ ಪರಿಚಯವಿರುವ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೂ ನಾಲ್ವರ ಸುಳಿವು ಸಿಕ್ಕಿಲ್ಲ.

ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ರಮೇಶ್ ಅವರ ಕೊನೆಯ ಮೊಬೈಲ್ ನೆಟ್‌ವರ್ಕ್ ಲೊಕೇಶನ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ರಮೇಶ್ ಕುಮಾರ್ ಸಾರ್ವಜನಿಕರಿಂದಲೂ ಹಣ ಸಂಗ್ರಹಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟವಾಗಿದ್ದೇ ದಂಪತಿ ಹಾಗೂ ಇಬ್ಬರು ಮಕ್ಕಳ ನಾಪತ್ತೆಗೆ ಕಾರಣವಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಆಗಸ್ಟ್ 14ರಂದು ರಮೇಶ್ ಕುಮಾರ್ ತಮ್ಮ ಪೋಷಕರಿಗೆ ಕರೆ ಮಾಡಿ, ವೈಯಕ್ತಿಕ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ತಿಳಿಸಿದ್ದಾರೆ. ಬಳಿಕ ರಮೇಶ್ ಕುಟುಂಬ ತಮ್ಮ ಸ್ವಂತ ಕಾರು ಅಥವಾ ಬೈಕ್ ಬಳಸದೆ, ಅವುಗಳನ್ನು ಮನೆಯ ಬಳಿಯೇ ನಿಲ್ಲಿಸಿ, ಆಟೋದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಆದರೆ ಬೆಂಗಳೂರಿಗೆ ತೆರಳಿದ ಬಳಿಕ ನಾಲ್ವರೂ ಇದುವರೆಗೆ ಮನೆಗೆ ವಾಪಸ್ ಬಂದಿಲ್ಲ. ಕುಟುಂಬದ ಎಲ್ಲರ ಮೊಬೈಲ್‌ಗಳು ಸ್ವಿಚ್‌ಆಫ್ ಆಗಿದ್ದು, ಕರೆ ಮಾಡಿದರೂ ಸಂಪರ್ಕಕ್ಕೆ ಸಿಗುತ್ತಿಲ್ಲ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?