LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೇಪಾಳ ಪ್ರವಾಹ ದುರಂತ: ನಾಪತ್ತೆಯಾದ ಕನ್ನಡಿಗರ ಬಗ್ಗೆ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

ಬೆಂಗಳೂರು :   ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

 ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.

 ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.

 ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B…) ಲಿಂಕ್ ಅನ್ನು ಸಹ ಒದಗಿಸಿದೆ.

 ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು [email protected] ವಿಳಾಸಕ್ಕೆ ಕಳುಹಿಸಬಹುದಾಗಿದೆ.

ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು ಪ್ರಕಟಣೆಯಲ್ಲಿ ತಿಳಿಸಿದೆ.

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?