LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹ ಜ್ಯೋತಿ ಮರುಪರಿಶೀಲನೆ: ಉಚಿತ ವಿದ್ಯುತ್ ಕೈತಪ್ಪುವ ಭೀತಿಯಿಂದ ಲಕ್ಷಾಂತರ ಫಲಾನುಭವಿಗಳ ನಿರಾಸಕ್ತಿ

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ದುರ್ಬಳಕೆ ತಡೆಯಲು ಮತ್ತು ಅನರ್ಹರನ್ನು ಪಟ್ಟಿಯಿಂದ ಹೊರಗಿಡಲು ಇಂಧನ ಇಲಾಖೆಯು ಮರುಪರಿಶೀಲನಾ ಕಾರ್ಯವನ್ನು ಚುರುಕುಗೊಳಿಸಿದೆ. ಜುಲೈ 1ರಿಂದ ಆರಂಭವಾಗಿರುವ ಈ ಪ್ರಕ್ರಿಯೆಯು ಸೆಪ್ಟೆಂಬರ್ 30ರವರೆಗೆ ನಡೆಯಲಿದ್ದು, ಈವರೆಗೆ ಶೇಕಡಾ 72ರಷ್ಟು ಅಂದರೆ ಸುಮಾರು 1.19 ಕೋಟಿ ಫಲಾನುಭವಿಗಳ ಪರಿಶೀಲನೆ ಪೂರ್ಣಗೊಂಡಿದೆ. ರಾಜ್ಯದಲ್ಲಿ ಒಟ್ಟು 1.65 ಕೋಟಿ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಿದ್ದು, ಇನ್ನುಳಿದ ಲಕ್ಷಾಂತರ ಮಂದಿ ಈ ಪ್ರಕ್ರಿಯೆಗೆ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ವಿದ್ಯುತ್ ಸರಬರಾಜು ಸಂಸ್ಥೆಗಳ ಸಿಬ್ಬಂದಿ ಮನೆ ಮನೆಗೆ ತೆರಳಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದರೂ, ಯೋಜನೆಯ ಸೌಲಭ್ಯ ಕೈತಪ್ಪಬಹುದು ಎಂಬ ಭೀತಿಯಿಂದ ಕೆಲ ಫಲಾನುಭವಿಗಳು ಮಾಹಿತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಮೀಟರ್ ರೀಡರ್‌ಗಳು ಹಲವು ಬಾರಿ ಭೇಟಿ ನೀಡಿದರೂ ಸೂಕ್ತ ಮಾಹಿತಿ ಸಿಗದ ಹಿನ್ನೆಲೆಯಲ್ಲಿ, ಸಹಕರಿಸದವರ ಪ್ರತ್ಯೇಕ ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲು ಎಸ್ಕಾಂಗಳು ನಿರ್ಧರಿಸಿವೆ. ಈ ಮರುಪರಿಶೀಲನೆ ವೇಳೆ ಮುಖ್ಯವಾಗಿ ಆದಾಯ ತೆರಿಗೆ ಪಾವತಿದಾರರು ಹಾಗೂ ಇತರೆ ರಾಜ್ಯಗಳ ಮತದಾರರ ಗುರುತಿನ ಚೀಟಿ ಹೊಂದಿರುವವರನ್ನು ಗುರುತಿಸಲಾಗುತ್ತಿದ್ದು, ಅಂತಹ ಅನರ್ಹರು ಯೋಜನೆಯಿಂದ ಹೊರಬೀಳುವ ಸಾಧ್ಯತೆಯಿದೆ.

ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಇನ್ನೂ 45.78 ಲಕ್ಷ ಫಲಾನುಭವಿಗಳ ಮರುಪರಿಶೀಲನೆ ಬಾಕಿಯಿದ್ದು, ನೀಡಲಾಗಿರುವ ಸೆಪ್ಟೆಂಬರ್ 30ರ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ನಿಗದಿತ ಸಮಯದೊಳಗೆ ಪರಿಶೀಲನೆಗೆ ಸ್ಪಂದಿಸದಿದ್ದರೆ ಗೃಹ ಜ್ಯೋತಿ ಯೋಜನೆಯಡಿ ಸಿಗುತ್ತಿರುವ ಉಚಿತ ವಿದ್ಯುತ್ ಸೌಲಭ್ಯವನ್ನು ಕಳೆದುಕೊಳ್ಳಬೇಕಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಎದುರಾಗಿದೆ.

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!