LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾತು ಕೇಳದ ಅಧಿಕಾರಿಗಳಿಗೆ ಸಚಿವ ಬಸವರಾಜ ರಾಯರೆಡ್ಡಿ ಖಡಕ್ ಎಚ್ಚರಿಕೆ: ಕೆಲಸದಿಂದ ವಜಾಗೊಳಿಸುವ ವಾರ್ನಿಂಗ್

ಕೊಪ್ಪಳ ಜಿಲ್ಲೆಯ ಗುನ್ನಾಳ ಗ್ರಾಮದಲ್ಲಿ ನೂತನ ಪದವಿಪೂರ್ವ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ತಮ್ಮ ಮಾತು ಕೇಳದ ಹಾಗೂ ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ಯಾವುದೇ ಮುಲಾಜಿಲ್ಲದೆ ಕೆಲಸದಿಂದ ವಜಾಗೊಳಿಸುವುದಾಗಿ (ಫೈರ್) ಅವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯು ಅತ್ಯಂತ ಹೆಚ್ಚಿನ ಕಾರ್ಯಭಾರವಿರುವ ಇಲಾಖೆಯಾಗಿದ್ದು, ರಾಜ್ಯದಲ್ಲಿ 96 ವಿಶ್ವವಿದ್ಯಾಲಯಗಳು ಹಾಗೂ 1.52 ಕೋಟಿ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ತಾವು ಸದಾ ಕೆಲಸದೊತ್ತಡದಲ್ಲಿ ಇರುತ್ತೇನೆ. ಆದ್ದರಿಂದ ಪತ್ರಗಳಿಗೆ ಡಿಜಿಟಲ್ ಸಿಗ್ನೇಚರ್ (ಡಿಜಿಟಲ್ ಸಹಿ) ಬಳಸಿ ನೀಡುವಂತೆ ವೇದಿಕೆ ಮೇಲಿಂದಲೇ ತಮ್ಮ ಆಪ್ತ ಸಹಾಯಕರಿಗೆ (ಪಿಎ) ಸೂಚನೆ ನೀಡಿದರು. ಅಲ್ಲದೆ, ಯಲಬುರ್ಗಾ ತಹಶೀಲ್ದಾರ್ ಪ್ರಕಾಶ್ ನಾಶಿ ಅವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ತಾವು ಸದಾ ಕಾರ್ಯನಿರತರಾಗಿರುವುದರಿಂದ ತಹಶೀಲ್ದಾರ್ ಅವರೇ ತಮ್ಮ ಸಾರ್ವಜನಿಕ ಸಂಪರ್ಕಾಧಿಕಾರಿಯಂತೆ (ಪಿಆರ್‌ಓ) ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು. ಇದೇ ವೇಳೆ ಇಲಾಖೆಯಲ್ಲಿ ಯಾರು ಮಾತು ಕೇಳುವುದಿಲ್ಲ ಎಂಬುದನ್ನು ತಮ್ಮ ಗಮನಕ್ಕೆ ತರುವಂತೆಯೂ ತಿಳಿಸಿದರು.

ಇದೇ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿದ್ದ ಗೊಂದಲಗಳಿಗೆ ಸಚಿವರು ತೆರೆ ಎಳೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಯಾವುದೇ ಗ್ಯಾರಂಟಿ ಯೋಜನೆಗಳನ್ನು ಕಾರಣಕ್ಕೂ ನಿಲ್ಲಿಸುವುದಿಲ್ಲ ಹಾಗೂ ಆ ಎಲ್ಲಾ ಯೋಜನೆಗಳು ಮುಂದೆಯೂ ನಿರಂತರವಾಗಿ ಮುಂದುವರಿಯಲಿವೆ ಎಂದು ಅವರು ವೇದಿಕೆ ಮೂಲಕ ಜನತೆಗೆ ಸ್ಪಷ್ಟಪಡಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?