LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ: ಆಫ್ರಿಕಾದಲ್ಲಿ ಅಕ್ರಮ ಗಣಿಗಾರಿಕೆ, ವಿದೇಶಿ ಹೂಡಿಕೆ ಆರೋಪ

ಬೆಂಗಳೂರು: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಈ ಕಾರ್ಯಚರಣೆಯ ಹಿಂದಿನ ಪ್ರಮುಖ ಕಾರಣಗಳು ಈಗ ಬಹಿರಂಗಗೊಂಡಿವೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ನಿಯಮಗಳನ್ನು ಗಾಳಿಗೆ ತೂರಿ ವಿದೇಶಗಳಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ಹೂಡಿಕೆ ಮಾಡಿರುವ ಗಂಭೀರ ಆರೋಪ ಸಚಿವರ ಮೇಲಿದೆ. ತನಿಖೆಯ ವೇಳೆ ಸತೀಶ್ ಜಾರಕಿಹೊಳಿ ಅವರು ಆಫ್ರಿಕಾದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಉದ್ಯಮದಲ್ಲಿ ಭಾರಿ ಪ್ರಮಾಣದ ಹಣವನ್ನು ಹೂಡಿಕೆ ಮಾಡಿರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಅಕ್ರಮ ಹಣಕಾಸು ಜಾಲದ ತನಿಖೆ ಮುಂದುವರಿದಂತೆ ಆಫ್ರಿಕಾದ ಗಣಿಗಾರಿಕೆ ಕಂಪನಿಯಲ್ಲಿ ಅವರ ಕುಟುಂಬಸ್ಥರೇ ಪ್ರಮುಖ ಹುದ್ದೆಗಳಲ್ಲಿದ್ದಾರೆ ಎಂಬ ಕುತೂಹಲಕಾರಿ ಮಾಹಿತಿ ಹೊರಬಿದ್ದಿದೆ. ಸಚಿವರ ಪುತ್ರ ರಾಹುಲ್ ಜಾರಕಿಹೊಳಿ ಹಾಗೂ ಅವರ ಸಹೋದರಿ ಲಕ್ಷ್ಮಿ ಈ ವಿದೇಶಿ ಗಣಿಗಾರಿಕೆ ಸಂಸ್ಥೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಕ್ರಮ ಮಾರ್ಗಗಳ ಮೂಲಕ ವಿದೇಶಕ್ಕೆ ಕೋಟ್ಯಂತರ ರೂಪಾಯಿ ನಿಧಿ ವರ್ಗಾವಣೆ ಮಾಡಿ, ಕುಟುಂಬದವರ ಹೆಸರಿನಲ್ಲಿ ಕಂಪನಿಗಳನ್ನು ಸ್ಥಾಪಿಸಿರುವ ಕುರಿತು ಇಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಈ ದಾಖಲೆಗಳ ಸಂಪೂರ್ಣ ಪರಿಶೀಲನೆ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಇಡಿ ನೀಡುವ ಅಧಿಕೃತ ಮಾಹಿತಿಯಿಂದ ಈ ಅಕ್ರಮ ಹೂಡಿಕೆಯ ಸಂಪೂರ್ಣ ಜಾಲ ಹೊರಬೀಳಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!