LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಯೇ ಅಸಮರ್ಪಕ: ಸಚಿವ ಈಶ್ವರ ಖಂಡ್ರೆ ಆಕ್ರೋಶ

ಬೆಂಗಳೂರು: ಬರ ಪೀಡಿತ ಪ್ರದೇಶ ಘೋಷಣೆಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಗಳೇ ಅಸಮರ್ಪಕವಾಗಿದ್ದು, ಇದನ್ನು ಬದಲಾಯಿಸುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ 2026ರ ಮುಂಗಾರು ಮತ್ತು ಬರ ಪರಿಸ್ಥಿತಿ ಹಾಗೂ ಇತರ ನೈಸರ್ಗಿಕ ವಿಕೋಪ ಪರಿಸ್ಥಿತಿಗಳ ಪರಾಮರ್ಶೆ ಮತ್ತು ಸಮರ್ಥವಾಗಿ ನಿಭಾಯಿಲು ನೀತಿ ನಿರೂಪಣೆ ಹಾಗೂ ಅಗತ್ಯ ಕ್ರಮಗಳ ಬಗ್ಗೆ ನಿರ್ಣಯಿಸುವ ಕುರಿತಂತೆ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಅವರು ಈ ಸಲಹೆ ನೀಡಿದರು.

ಈಗಾಗಲೇ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಿದ್ದಾಗ್ಯೂ ಅದನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಹೀಗಾಗಿ ಅಂಶವಾರು ಬದಲಾವಣೆಗೆ ಪತ್ರಬರೆದು ಒತ್ತಾಯಿಸಬೇಕು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿಯ ನಿಯಮಾವಳಿಗಳ ಪ್ರಕಾರ, ರಾಜ್ಯದ ಯಾವುದೇ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಲು ಕೇವಲ ಮಳೆ ಕೊರತೆಯಷ್ಟೇ ಅಲ್ಲದೆ ಉಪಗ್ರಹ ಆಧಾರಿತ ಸೂಚ್ಯಂಕಗಳನ್ನು ಕಡ್ಡಾಯವಾಗಿ ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಅಲ್ಪ ಮಳೆಯಾಗಿ ಬೆಳೆ ಕಾಳುಕಚ್ಚದಿದ್ದರೂ ಬಿತ್ತನೆ ಆಧಾರದಲ್ಲಿ ನಿರಾಕರಿಸಲಾಗುತ್ತದೆ ಇದು ಸರಿಯಲ್ಲ ಎಂದರು.

ಕರ್ನಾಟಕದಲ್ಲಿ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಲು ಮತ್ತು ಅಧಿಕೃತವಾಗಿ ಬರ ಘೋಷಣೆ ಮಾಡಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆ.ಎಸ್.ಎನ್.ಡಿ.ಎಂ.ಸಿ.) ಮತ್ತು ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಕೋಶ (ಡಿಸಾಸ್ಟರ್ ಮ್ಯಾನೇಜ್ಮೆಂಟ್ ಸೆಲ್) ವರದಿ ನೀಡಬೇಕಾಗುತ್ತದೆ. ವಾಡಿಕೆಗಿಂತ ಶೇ.60ರಷ್ಟು ಮಳೆ ಕಡಿಮೆ ಆಗಿದ್ದರೆ, ವಾಡಿಕೆಗಿಂತ ಶೇ.50ಕ್ಕಿಂತ ಹೆಚ್ಚು ಬಿತ್ತನೆ ಮಾಡದಿದ್ದರೆ ಮತ್ತು ಸತತ 3 ವಾರಗಳ ಕಾಲ ಶುಷ್ಕ ವಾತಾವರಣ ಅಂದರೆ 3 ವಾರ ಮಳೆ ಆಗದೆ ಭೂಮಿಯಲ್ಲಿ ತೇವಾಂಶ ಇಲ್ಲದಿದ್ದರೆ ಮಾತ್ರ ಬರಪೀಡಿತ ತಾಲೂಕು ಎಂದು ಗ್ರೌಂಡ್ ಟ್ರೂಥಿಂಗ್ ಮಾಡಿ ನಿರ್ಣಯಿಸಲಾಗುತ್ತದೆ. ಅಲ್ಪ ತುಂತುರು ಮಳೆಯಾಗಿ ತೇವಾಂಶವಿದ್ದರೂ ಈ ಕೈಪಿಡಿ ನಿಯಮಾವಳಿಗಳೇ ಮಾರಕವಾಗುತ್ತವೆ ಎಂದರು.

ಉಪ ಸಮಿತಿ ಸಭೆಯಲ್ಲಿ ಸಚಿವರುಗಳಾದ ಲಕ್ಷ್ಮಣ ಸವದಿ, ಪುಟ್ಟರಂಗಶೆಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?