LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈಶ್ವರ ಖಂಡ್ರೆ ಭೇಟಿ ಬೆನ್ನಲ್ಲೇ ಹಿರೇಹಳ್ಳಿ ಕೆರೆ ಒತ್ತುವರಿ ತೆರವು

ಬೆಂಗಳೂರು :  ಅರಣ್ಯ ಒತ್ತುವರಿದಾರರಿಗೆ ಸಿಂಹಸ್ವಪ್ನವಾಗಿದ್ದ ಈಶ್ವರ ಖಂಡ್ರೆ, ಈಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಗ್ರಾ.ಪಂ.ಗೆ ಸೇರಿದ ಕೆರೆ ಒತ್ತುವರಿ ತೆರವಿಗೆ ಆದೇಶಿಸಿದ್ದು, ಇಂದು ತುಮಕೂರು, ಹಿರೇಹಳ್ಳಿಯ ಒತ್ತುವರಿ ಪ್ರದೇಶದ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ರಾಜ್ಯದಲ್ಲಿ ಗ್ರಾ.ಪಂ.ಗೆ ಸೇರಿದ 32504 ಕೆರೆಗಳ ಪೈಕಿ ತೆರವಾಗದೆ ಉಳಿದಿರುವ 4828 ಕೆರೆಗಳ 11671 ಎಕರೆ ಒತ್ತುವರಿಯನ್ನು ನಿಯಮಾನುಸಾರ  ತೆರವು ಮಾಡುವಂತೆ ಇತ್ತೀಚೆಗಷ್ಟೇ ಸಚಿವರು ಆದೇಶ ನೀಡಿದ್ದರು. ಬಳಿಕ ಸೆ.5ರಂದು ತುಮಕೂರು ಗ್ರಾಮಾಂತರ ಜಿಲ್ಲೆ ಊರ್ಡಿಗೆರೆ ಹೋಬಳಿ ಹಿರೇಹಳ್ಳಿ ಕೆರೆ ಪ್ರದೇಶಕ್ಕೆ ಖುದ್ದು ಭೇಟಿ ನೀಡಿ ಒತ್ತುವರಿ ತೆರವಿಗೆ ಸೂಚನೆ ನೀಡಿದ್ದರು.

ಸಚಿವರ ಭೇಟಿ ಹಾಗೂ ಆದೇಶದ ಬೆನ್ನಲ್ಲೆ ಪಂಚಾಯತಿ ಅಧಿಕಾರಿಗಳು,  ಸರ್ವೆ ನಂ.118ರಲ್ಲಿರುವ 17.32 ಎಕರೆ ಕೆರೆ ಅಂಗಳದ ಪೈಕಿ ಒತ್ತುವರಿಯಾಗಿರುವ ಪ್ರದೇಶವನ್ನು ಭೂಮಾಪಕರ ನೆರವಿನಿಂದ ಗುರುತಿಸಿ,  ತೆರವು ಮಾಡಿ, ಗಡಿ ಗುರುತಿಸಿ ಹದ್ದುಬಸ್ತು ಮಾಡಲು ಮುಂದಾಗಿದ್ದಾರೆ.

ಜೆಸಿಬಿ ವಾಹನಗಳ ಜೊತೆ ಕಾರ್ಯಾಚರಣೆಗಿಳಿದಿರುವ ಪಂಚಾಯತಿ ಅಧಿಕಾರಿ, ಸಿಬ್ಬಂದಿ, ಅಕ್ರಮವಾಗಿ ಕೆರೆಗೆ ಮಣ್ಣು ತುಂಬಿ ಒತ್ತುವರಿ ಮಾಡಿದ್ದ ಸುಮಾರು 28 ಗುಂಟೆ ತೆರವು ಮಾಡಿಸಿದ್ದು, ಕೆರೆಯ ಹೆಚ್ಚಿನ ಭೂಮಿ ಸಾರ್ವಜನಿಕ ರಸ್ತೆಯಾಗಿ ಬಳಕೆಯಾಗುತ್ತಿರುವುದನ್ನು ಗುರುತಿಸಿದ್ದಾರೆ. ಕೆರೆಯ ಉಳಿಕೆ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಯಲಿದೆ. ಸಂಪೂರ್ಣ 17.32 ಎಕರೆ ಕೆರೆಗೂ ಗಡಿ ಗುರುತು ಮಾಡುವ ಕಾರ್ಯ ಪ್ರಗತಿಯಲ್ಲಿದ್ದು,  ಇದು ರಾಜ್ಯದ ಇತರೆ ಕೆರೆ ಒತ್ತುವರಿದಾರರಿಗೂ ಎಚ್ಚರಿಕೆಯ ಗಂಟೆಯಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?