LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ : ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿವೆ ವಿಧಾನಸೌಧ, ಮೈಸೂರು ಅರಮನೆ ಸೇರಿ ರಾಜ್ಯದ ಪಾರಂಪರಿಕ ಕಟ್ಟಡಗಳು!

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ಮೈಸೂರು ಅರಮನೆ, ಕೃಷ್ಣರಾಜಸಾಗರ ಆಣೆಕಟ್ಟು, ತುಂಗಭದ್ರಾ ಜಲಾಶಯ, ಆಲಮಟ್ಟಿ ಜಲಾಶಯ ಸೇರಿದಂತೆ ರಾಜ್ಯದ ಹನ್ನೊಂದು ಪ್ರಮುಖ ಪಾರಂಪರಿಕ ಕಟ್ಟಡಗಳಿಗೆ ಸೆ.10 ರಿಂದ ನಾಲ್ಕು ದಿನಗಳ ಕಾಲ ವರ್ಣರಂಜಿತ ವಿದ್ಯುತ್ ದೀಪಾಲಂಕಾರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗುತ್ತಿದೆ.

ಬೆಂಗಳೂರಿನ ಪುರಭವನ, ಕೆ.ಆರ್.ಪುರಂ‌ ತೂಗುಸೇತುವೆ, ಮೈಸೂರು ಅರಮನೆ ಹಾಗೂ ಜಯಮಾರ್ತಾಂಡ ಮಹಾದ್ವಾರ, ಐತಿಹಾಸಿಕ ಹಂಪಿಯ ವಿಶ್ವವಿಖ್ಯಾತ ವಿರೂಪಾಕ್ಷೇಶ್ವರ ದೇವಾಲಯದ ಬಿಷ್ಟಪ್ಪಯ್ಯನ ಗೋಪುರ, ಕಲಬುರ್ಗಿಯ ಜಿಲ್ಲಾಧಿಕಾರಿ ಕಚೇರಿ, ಜಗತ್ ಸರ್ಕಲ್ ಸೇರಿದಂತೆ ಪ್ರಮುಖ ಸ್ಥಳಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲಿವೆ. ಸರ್ಕಾರದ ಅಭಿವೃದ್ಧಿ ಯೋಜನೆ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಯಶೋಗಾಥೆಯನ್ನು ಬಿಂಬಿಸುವ ಮನಮೋಹಕ ಎಲ್‌ಇಡಿ ಪ್ರದರ್ಶನಗಳು ,ಧ್ವನಿ ಮತ್ತು ಬೆಳಕು ,ತ್ರಿ ಡಿ ಮ್ಯಾಪಿಂಗ್ ಪ್ರದರ್ಶನಗಳ ಆಯ್ದ ಕಟ್ಟಡಗಳ ಮೇಲೆ ಬಿತ್ತರಗೊಳ್ಳಲಿವೆ.

ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಡಳಿತ ವತಿಯಿಂದಲೂ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ.

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೇರಿ ನೂರು ದಿನಗಳ ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಸಾರ್ವಜನಿಕರ ಕುಂದು ಕೊರತೆ, ಅಹವಾಲು ಆಲಿಸಿ, ಪರಿಹರಿಸಲು "ಪ್ರಜಾಸೇವಾ" ಇಲಾಖೆ ಸ್ಥಾಪನೆ, ಗ್ಯಾರಂಟಿ ಯೋಜನೆಗಳಡಿ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ, ರೌಡಿಗಳ ನಿಗ್ರಹಕ್ಕೆ ಜಿಲ್ಲೆಗೊಂದು ಪಡೆ ರಚನೆ, ಕೇಂದ್ರದ ನೀತಿ ಆಯೋಗದ ಸಭೆಯಲ್ಲಿ ಕರ್ನಾಟಕದ ಬೇಡಿಗಳ ಪ್ರಬಲ ಮಂಡನೆ, ನೂತನ ಸಿಎಸ್‌ಆರ್ ನೀತಿ ಕ್ರಮ, ಬರಪರಿಸ್ಥಿತಿ ನಿರ್ವಹಣೆಗೆ ವಿಭಾಗವಾರು ಪರಿಶೀಲನೆ ನಡೆಸಿ ಅಗತ್ಯ ಸಿದ್ಧತೆ ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ವಿಶೇಷ ಒತ್ತು, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ರೈತರ ಜೀವನಾಡಿಯಾಗಿರುವ ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯಕ್ಕೆ ಹೊಸ ಸ್ಪಿಲ್ ವೇ ಗೇಟುಗಳ ಉದ್ಘಾಟನೆ, ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಒತ್ತು, 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕ್ರಮ ಸೇರಿದಂತೆ ಅನೇಕ ಕಾರ್ಯದರ್ಶಿಗಳನ್ನು ಅನುಷ್ಠಾನಗೊಳಿಸಿದ್ದಾರೆ.

ಮುಖ್ಯಮಂತ್ರಿಗಳು ಮುಂಬರುವ ದಿನಗಳಲ್ಲಿ ದೃಢ ಕರ್ನಾಟಕದ ಸಂಕಲ್ಪಕ್ಕೆ ಮಹತ್ವದ ಹೆಜ್ಜೆಗಳನ್ನು ಇಡಲು ಆಲೋಚಿಸಿದ್ದಾರೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಎಂ.ಎನ್‌.ಅನುಚೇತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!