LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶ್ರಮ, ಆರ್ಥಿಕ ಶಿಸ್ತಿನಿಂದ ಉದ್ಯಮದಲ್ಲಿ ಯಶಸ್ಸು: ಸಾಗರದಲ್ಲಿ ಆನಂದ ಸುವರ್ಣ ಅಭಿಮತ

ಸಾಗರ: ಸ್ವಂತ ಉದ್ಯಮ ಆರಂಭಿಸಲು ಬಯಸುವ ಅರ್ಹ ಸದಸ್ಯರಿಗೆ ಸೂಕ್ತ ಆರ್ಥಿಕ ನೆರವು ನೀಡಿ, ಅವರ ಬದುಕನ್ನು ಸ್ವಾವಲಂಬಿಯಾಗಿಸುವ ಉದ್ದೇಶದಿಂದ ಸಿಡ್ಬಿ ಪ್ರಯಾಸ್ (SIDBI Prayaas) ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ತಿಳಿಸಿದ್ದಾರೆ.

ಪಟ್ಟಣದ ಯೋಜನಾ ಕಚೇರಿಯಲ್ಲಿ ಸ್ವ-ಉದ್ಯೋಗ ಆರಂಭಿಸುವ ಆಸಕ್ತ ಸದಸ್ಯರಿಗಾಗಿ ಆಯೋಜಿಸಲಾಗಿದ್ದ ವಿಶೇಷ ಪ್ರೇರಣಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ಅರ್ಹ ಸದಸ್ಯರಿಗೆ ಈ ಯೋಜನೆಯ ಮೂಲಕ ಆರ್ಥಿಕ ಉತ್ತೇಜನ ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು.

ಪರಿಶ್ರಮ ಮತ್ತು ಗುಣಮಟ್ಟವೇ ಯಶಸ್ಸಿನ ಮೂಲಮಂತ್ರ

ಹೊರನೋಟಕ್ಕೆ ಸ್ವಂತ ಉದ್ಯಮ ನಡೆಸುವುದು ಸುಲಭವೆನಿಸಿದರೂ, ಅದರಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಶ್ರಮವಹಿಸಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ. ಯಾವುದೇ ವಹಿವಾಟು ಆರಂಭಿಸುವ ಮೊದಲು ಅದರ ಬಗ್ಗೆ ಸ್ಪಷ್ಟ ತಿಳಿವಳಿಕೆ ಮತ್ತು ವೃತ್ತಿಪರ ಬದ್ಧತೆ ಇರಬೇಕು. ಉತ್ಪಾದನೆ ಅಥವಾ ಸೇವೆಯಲ್ಲಿ ಗುಣಮಟ್ಟ ಕಾಪಾಡಿಕೊಂಡಾಗ ಗ್ರಾಹಕರ ವಿಶ್ವಾಸ ಗಳಿಸಬಹುದು. ನಗುಮುಖದ ಸಮಯೋಚಿತ ಸೇವೆ ಮತ್ತು ಪ್ರಾಮಾಣಿಕತೆ ವ್ಯಾಪಾರವನ್ನು ಸುಸ್ಥಿರವಾಗಿ ಬೆಳೆಸುತ್ತದೆ ಎಂದು ಸುವರ್ಣ ಕಿವಿಮಾತು ಹೇಳಿದರು.

ಬಂಡವಾಳದ ಸದ್ಬಳಕೆ ಹಾಗೂ ಆರ್ಥಿಕ ಶಿಸ್ತು ಅತ್ಯಗತ್ಯ

ಸಂಸ್ಥೆಯಿಂದ ದೊರೆಯುವ ಸಾಲ ಸೌಲಭ್ಯವನ್ನು ವ್ಯಾಪಾರದ ಬೆಳವಣಿಗೆಗೆ ಮಾತ್ರ ಸದ್ಬಳಕೆ ಮಾಡಿಕೊಳ್ಳಬೇಕು. ಅಗತ್ಯಕ್ಕೆ ತಕ್ಕಷ್ಟು ಬಂಡವಾಳವನ್ನು ಪಡೆದು, ಪ್ರತಿಯೊಂದು ಹಂತದಲ್ಲೂ ನಿಖರ ಲೆಕ್ಕಾಚಾರ ಇಟ್ಟುಕೊಳ್ಳುವುದು ಅತ್ಯಗತ್ಯ. ಹಣದ ದುರ್ಬಳಕೆ ಮಾಡದೆ, ವ್ಯವಹಾರದಲ್ಲಿ ಶಿಸ್ತು ಮತ್ತು ತ್ಯಾಗ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಸಿಡ್ಬಿ ಪ್ರಯಾಸ್ ಯೋಜನೆಯ ಆರ್ಥಿಕ ನೆರವು ನಿಜವಾದ ಪ್ರಗತಿಗೆ ದಾರಿದೀಪವಾಗುತ್ತದೆ ಎಂದು ಅವರು ವಿವರಿಸಿದರು. ಸ್ವಸಹಾಯ ಸಂಘಗಳನ್ನು ತಾಯಿಯಂತೆ ಗೌರವಿಸಿ ಸಂಘಟಿತವಾಗಿ ಮುನ್ನಡೆಯಲು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಿರಸಿ ವಿಭಾಗದ ಜಿಲ್ಲಾ ನಿರ್ದೇಶಕ ದಿನೇಶ್ ಎಂ. ಉಪಸ್ಥಿತರಿದ್ದರು. ತಾಲ್ಲೂಕಿನ ಹಲವು ಭಾಗಗಳಿಂದ ಆಗಮಿಸಿದ್ದ ನೂತನ ಉದ್ಯಮ ಆಕಾಂಕ್ಷಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾರ್ಗದರ್ಶನ ಪಡೆದರು.

ತಾಲ್ಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಪಿ. ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೆಕ್ಕ ಪರಿಶೋಧಕ ಭಾಸ್ಕರ್ ವಂದನಾರ್ಪಣೆ ಮಾಡಿದರು. ಕಚೇರಿ ಸಹಾಯಕ ಮಧು ಕಾರ್ಯಕ್ರಮ ನಿರ್ವಹಣೆಯಲ್ಲಿ ಸಹಕರಿಸಿದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!