LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೌರಿ-ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ಸಿಸ್ಟಂ ಸಂಪೂರ್ಣ ನಿಷೇಧ: ಕಟ್ಟುನಿಟ್ಟಿನ ಆದೇಶ

ಗೌರಿ-ಗಣೇಶ ಹಬ್ಬದ ಆಚರಣೆ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು-ಸುವ್ಯವಸ್ಥೆ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಡಿಜೆ ಮತ್ತು ಹೈ-ಬೇಸ್ ಸೌಂಡ್ ಸಿಸ್ಟಂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೆ. ನಾಗೇಂದ್ರ ಪ್ರಸಾದ್ ಅವರು ಆದೇಶ ಹೊರಡಿಸಿದ್ದಾರೆ.

‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023' ರ ಕಲಂ 152 ಮತ್ತು 163 ರ ಅಡಿಯಲ್ಲಿ ತಮಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ. ಈ ನಿಷೇಧಾಜ್ಞೆಯು ಸೆ.14 ರಿಂದ ಶ್ರೀ ಗೌರಿ-ಗಣೇಶ ಹಬ್ಬ ಮುಕ್ತಾಯವಾಗುವವರೆಗೆ ಜಿಲ್ಲೆಯಾದ್ಯಂತ ಜಾರಿಯಲ್ಲಿರಲಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಶೇಷವಾಗಿ ವಿಸರ್ಜನಾ ಮೆರವಣಿಗೆಗಳಲ್ಲಿ ಅತಿಯಾದ ಶಬ್ದ ಉಂಟುಮಾಡುವ ಡಿಜೆ ಬಾಕ್ಸ್ಗಳಿಂದ ಉಂಟಾಗುವ ನಿರಂತರ ಶಬ್ದ ಮಾಲಿನ್ಯವು ವಯೋವೃದ್ಧರು, ಚಿಕ್ಕ ಮಕ್ಕಳು, ಬಾಣಂತಿಯರು ಹಾಗೂ ಹೃದಯ ಸಂಬAಧಿ ಕಾಯಿಲೆಗಳಿಂದ ಬಳಲುತ್ತಿರುವವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವರದಿಯ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಂ, ಹೈ-ಬೇಸ್ ಸಿಸ್ಟಂ, ಡಿಜೆ ಬಾಕ್ಸ್ಗಳು ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಯಾವುದೇ ಧ್ವನಿವರ್ಧಕ ಉಪಕರಣಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್