LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ರಂಗಕರ್ಮಿ ಚಿದಂಬರ ರಾವ್ ಜಂಬೆ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ

ಶಿವಮೊಗ್ಗ: ಕನ್ನಡ ರಂಗಭೂಮಿಯ ದಿಗ್ಗಜ ನಿರ್ದೇಶಕ, ಮೈಸೂರಿನ ರಂಗಾಯಣದ ಮಾಜಿ ನಿರ್ದೇಶಕ ಹಾಗೂ ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ (ಎನ್‌ಎಸ್‌ಡಿ) ನಿವೃತ್ತ ಪ್ರಾಧ್ಯಾಪಕರಾಗಿದ್ದ ಚಿದಂಬರ ರಾವ್ ಜಂಬೆ ಅವರು ವಿಧಿವಶರಾಗಿದ್ದಾರೆ. ಅವರ ಅಗಲಿಕೆಯಿಂದಾಗಿ ಕನ್ನಡ ನಾಡಿನ ರಂಗ ಪರಂಪರೆಯ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದ್ದು, ಇಡೀ ರಂಗಭೂಮಿ ಶೋಕಸಾಗರದಲ್ಲಿ ಮುಳುಗಿದೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಹೇಳಿಕೆ ಪ್ರಕಟಿಸಿರುವಂತ ಅವರು, ಉತ್ತರ ಕನ್ನಡ ಜಿಲ್ಲೆಯ ಜಂಬೆ ಮೂಲದವರಾದ ಚಿದಂಬರ ರಾವ್ ಅವರು ರಂಗಭೂಮಿಯನ್ನೇ ಬದುಕಾಗಿಸಿಕೊಂಡು ದಶಕಗಳ ಕಾಲ ಸೇವೆ ಸಲ್ಲಿಸಿದವರು. ರಾಷ್ಟ್ರೀಯ ನಾಟಕ ಶಾಲೆಯಲ್ಲಿ (ಎನ್‌ಎಸ್‌ಡಿ) ಪರಿಣಿತಿ ಪಡೆದ ಬಳಿಕ, ಹೆಗ್ಗೋಡಿನ ನೀನಾಸಂ ರಂಗ ಶಿಕ್ಷಣ ಕೇಂದ್ರದ ಪ್ರಾಂಶುಪಾಲರಾಗಿ ಗ್ರಾಮೀಣ ಭಾಗದ ನೂರಾರು ಯುವ ಪ್ರತಿಭೆಗಳಿಗೆ ರಂಗಶಿಕ್ಷಣ ನೀಡಿದರು. ಇಂದು ಚಿತ್ರರಂಗ ಹಾಗೂ ರಂಗಭೂಮಿಯಲ್ಲಿ ಹೆಸರಾಗಿರುವ ಅನೇಕ ಕಲಾವಿದರು ಮತ್ತು ತಂತ್ರಜ್ಞರನ್ನು ರೂಪಿಸಿದ ಹಿರಿಮೆ ಇವರ ಮಾರ್ಗದರ್ಶನಕ್ಕೆ ಸಲ್ಲುತ್ತದೆ ಎಂದಿದ್ದಾರೆ.

ಬಿ.ವಿ. ಕಾರಂತರ ನಂತರ ಮೈಸೂರಿನ ರಂಗಾಯಣದ ಸಾರಥ್ಯ ವಹಿಸಿಕೊಂಡ ಚಿದಂಬರ ರಾವ್ ಜಂಬೆ, ಆ ಸಂಸ್ಥೆಯ ಕಲಾ ಚಟುವಟಿಕೆಗಳಿಗೆ ಮತ್ತಷ್ಟು ಗಾಂಭೀರ್ಯ ಮತ್ತು ಹೊಸ ಆಯಾಮ ತಂದುಕೊಟ್ಟರು. ವಿಶ್ವಶ್ರೇಷ್ಠ ಷೇಕ್ಸ್‌ಪಿಯರ್ ಕೃತಿಗಳು, ಗ್ರೀಕ್ ಮತ್ತು ಸಂಸ್ಕೃತ ನಾಟಕಗಳನ್ನು ಸ್ಥಳೀಯ ಸಂವೇದನೆಗಳಿಗೆ ತಕ್ಕಂತೆ ರಂಗದ ಮೇಲೆ ತಂದು ಅದ್ಭುತ ಯಶಸ್ಸು ಕಂಡರು. ಅವರ ಶಿಸ್ತುಬದ್ಧ ರಂಗ ನಿರ್ದೇಶನ ಮತ್ತು ಪ್ರಯೋಗಶೀಲತೆ ಭಾರತೀಯ ರಂಗಭೂಮಿಯ ಇತಿಹಾಸದಲ್ಲಿ ಸದಾ ಸ್ಮರಣೀಯ ಎಂಬುದಾಗಿ ನೆನಪು ಮಾಡಿಕೊಂಡಿದ್ದಾರೆ.

ರಂಗ ಕ್ಷೇತ್ರಕ್ಕೆ ನೀಡಿದ ನಿಸ್ವಾರ್ಥ ಹಾಗೂ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಗೌರವಗಳು ಅವರಿಗೆ ಲಭಿಸಿದ್ದವು. ತಮ್ಮ ಜೀವನದ ಕೊನೆಯ ಕ್ಷಣದವರೆಗೂ ರಂಗಭೂಮಿಯ ಅಧ್ಯಯನ, ನಾಟಕ ಕೃತಿಗಳ ಅನುವಾದ ಮತ್ತು ರಂಗ ತರಬೇತಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂಬುದಾಗಿ ಹೇಳಿದ್ದಾರೆ.

ಖ್ಯಾತ ರಂಗಭೂಮಿ ನಿರ್ದೇಶಕರು, ದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ಪ್ರಾಧ್ಯಾಪಕರು, ನೀನಾಸಂ ರಂಗ ಶಿಕ್ಷಣ ಕೇಂದ್ರದ ಪ್ರಾಂಶುಪಾಲರು ಹಾಗೂ ಮೈಸೂರಿನ ರಂಗಾಯಣದ ನಿರ್ದೇಶಕರಾಗಿದ್ದರು. ಇಂತಹ ಚಿದಂಬರ ರಾವ್ ಜಂಬೆ ಅವರು ನಿಧನರಾದಂತ ಸುದ್ದಿ ತಿಳಿದು ಅತ್ಯಂತ ದುಖವಾಯಿತು. ಅವರು ಅವರ ಕುಟಂಬ, ಅಪಾರ ಶಿಷ್ಯ ಬಳಗವನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಅಂತಿಮ ನಮನಗಳು ಎಂಬುದಾಗಿ ಸಂತಾಪ ಸೂಚಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!