LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ರಾಷ್ಟ್ರೀಯವಾದಿ ಬಿಜೆಪಿಯಿಂದ ದೇಶಭಕ್ತಿ ಕಲಿಯುವ ಅಗತ್ಯವಿಲ್ಲ: ಸಚಿವ ಈಶ್ವರ ಖಂಡ್ರೆ ತಿರುಗೇಟು

ಬೆಂಗಳೂರು : ಭಾರತದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಕಾಂಗ್ರೆಸ್ ಪಕ್ಷ, ನಕಲಿ ರಾಷ್ಟ್ರೀಯವಾದಿ ಬಿಜೆಪಿಯಿಂದ ರಾಷ್ಟ್ರಭಕ್ತಿ, ದೇಶಪ್ರೇಮ ಕಲಿಯುವ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ರಾಜ್ಯ ಸರ್ಕಾರ, ರಾಷ್ಟ್ರಪತಿ, ಪ್ರಧಾನಿ ಹಾಗೂ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮ ಹೊರತುಪಡಿಸಿ, ಸರ್ಕಾರದ  ಇತರ ಸಮಾರಂಭಗಳಲ್ಲಿ 'ವಂದೇ ಮಾತರಂ' ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಆದೇಶಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

ಬ್ರಿಟಿಷರ ದಾಸ್ಯದಿಂದ ಭಾರತ ಮಾತೆಯನ್ನು ಬಂಧಮುಕ್ತಗೊಳಿಸಲು ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ವಂದೇ ಮಾತರಂ ಗೀತೆಯನ್ನು ಹಾಡಿ, ಇಡೀ ದೇಶದ ಉತ್ಸಾಹಿ ಯುವಕರಲ್ಲಿ ದೇಶಪ್ರೇಮ ತುಂಬಿದ್ದೇ ಕಾಂಗ್ರೆಸ್  ಎಂದರು.

ಸ್ವಾತಂತ್ರ್ಯಾಪೂರ್ವದಲ್ಲಿ1937ರ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿಯೇ  2 ಚರಣ ಹಾಡಬೇಕು ಎಂಬು ನಿಲುವು ತೆಗೆದುಕೊಳ್ಳಲಾಗಿದೆ. ಇದಕ್ಕೆ ನಮ್ಮ ಸರ್ಕಾರ ಇಂದಿಗೂ ಬದ್ಧವಾಗಿದೆ. ಇಷ್ಟು ದಿನಗಳ ಕಾಲ ಇಲ್ಲದ 6 ಚರಣದ ಬಗ್ಗೆ ಈಗ ಕಣ್ಣು ತೆರೆದಿರುವ ಬಿಜೆಪಿ 90 ವರ್ಷ ಏಕೆ ಸುಮ್ಮನ್ನಿತ್ತು ಎಂದು ಖಂಡ್ರೆ ಪ್ರಶ್ನಿಸಿದರು. 

ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಅನುದಾನವನ್ನೂ ನೀಡುತ್ತಿಲ್ಲ. ಬಿಜೆಪಿಯವರು ರಾಜ್ಯದ ಹಿತದೃಷ್ಟಿಯಿಂದ ಕೇಂದ್ರದ ಮೇಲೆ ಒತ್ತಡ ಹೇರಿ ಹಣ ಕೊಡಿಸುವ ಕಾರ್ಯ ಮಾಡುವ ಬದಲು, ಇಂತಹ ವಿಚಾರ ಇಟ್ಟುಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!