LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನಕ್ಕೆ ವಿಧಾನಪರಿಷತ್ ಉಪಸಭಾಪತಿ ಡಾ.ಉಮಾಶ್ರೀ ಸಂತಾಪ

ಬೆಂಗಳೂರು: ನಾಡಿನ ಖ್ಯಾತ ಹಿರಿಯ ರಂಗಕರ್ಮಿ, ನಿರ್ದೇಶಕ, ರಂಗ ಶಿಕ್ಷಕ, ಚಿಂತಕ ಚಿದಂಬರರಾವ್ ಜಂಬೆ ಅವರ ನಿಧನಕ್ಕೆ ಕರ್ನಾಟಕ ವಿಧಾನಪರಿಷತ್ ಉಪಸಭಾಪತಿಗಳು ಹಾಗೂ ಹಿರಿಯ ಕಲಾವಿದರಾದ ಡಾ. ಉಮಾಶ್ರೀ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ರಂಗಭೂಮಿಯ ಬೆಳವಣೆಗೆಯಲ್ಲಿ ಹಲವು ದಶಕಗಳ ಕಾಲ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಚಿದಂಬರರಾವ್ ಜಂಬೆ ಅವರು, ರಂಗ ನಿರ್ದೇಶನ ಮಾತ್ರವಲ್ಲದೆ, ರಂಗಶಿಕ್ಷಣಕ್ಕೂ ಹೆಚ್ಚಿನ ಮಹತ್ವ ನೀಡಿದ್ದರು. ಹಲವು ತಲೆಮಾರುಗಳ ಕಲಾವಿದರು ಮತ್ತು ರಂಗಾಸಕ್ತರಿಗೆ ತರಬೇತಿ ನೀಡಿದ ರಂಗಶಿಕ್ಷಕರು.

ವಿಭಿನ್ನ ಸಾಹಿತ್ಯಿಕ ಮತ್ತು ಸಾಮಾಜಿಕ ಹಿನ್ನೆಲೆಯ ಕೃತಿಗಳನ್ನು ರಂಗಕ್ಕೆ ಅಳವಡಿಸುವ ಮೂಲಕ ಕನ್ನಡ ರಂಗಭೂಮಿಯ ಪ್ರಯೋಗಶೀಲತೆಯನ್ನು ವಿಸ್ತರಿಸಿದರು. ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ಅನೇಕರು ರಂಗಭೂಮಿ, ಚಿತ್ರರಂಗ, ಕಿರುತೆರೆ ಹಾಗೂ ರಂಗಶಿಕ್ಷಣ ಕ್ಷೇತ್ರಗಳಲ್ಲಿ ತಮ್ಮದೇ ಆದ ಸ್ಥಾನ ಪಡೆದುಕೊಂಡಿದ್ದಾರೆ.

ತಮಗೂ ಕೂಡ ಹಿರಿಯರಾದ ಚಿದಂಬರರಾವ್ ಜಂಬೆ ಅವರು ಒಳ್ಳೆಯ ಮಾರ್ಗದರ್ಶಕರಾಗಿದ್ದರು. ಅವರ ನಿರ್ದೇಶನದ ಶ್ರಮಿಷ್ಠೆ ನಾಟಕವನ್ನು ತಮ್ಮ ಮೂಲಕ ಪ್ರದರ್ಶಿಸಿ, ತಮ್ಮನ್ನು ಇಡೀ ನಾಡಿನಾದ್ಯಂತ ʼಶ್ರಮಿಷ್ಠೆʼ ಯಾಗಿ ಪರಿಚಯಿಸಿದರು.  ಶ್ರಮಿಷ್ಠೆ ಮೂಲಕ ಸಮಕಾಲೀನ ಪ್ರೇಕ್ಷಕರಿಗೆ ಪರಿಣಾಮಯಾಗಿ ತಲುಪಿಸುವ ಪ್ರಯತ್ನ ಅವರ ನಿರ್ದೇಶನದಲ್ಲಿ ಎದ್ದು ಕಾಣುತ್ತಿತ್ತು.

ಕರ್ನಾಟಕ ರಂಗಶಿಕ್ಷಣ ಕ್ಷೇತ್ರದಲ್ಲಿ ಚಿದಂಬರರಾವ್ ಜಂಬೆ ಅವರ ಕೊಡುಗೆ ಅನನ್ಯ. ಅವರ ಅಗಲಿಕೆ ನಿಜಕ್ಕೂ ಅತ್ಯಂತ ದುಃಖ ತರುವಂತಹದ್ದು. ಜಂಬೆಯವರ ನಿಧನದಿಂದ ಕನ್ನಡ ರಂಗಕ್ಷೇತ್ರ ಬಡವಾಗಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ. ಅವರ ಅಗಲಿಕೆಯಿಂದ ಆವರ ಕುಟುಂಬಕ್ಕಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಡಾ. ಉಮಾಶ್ರೀ ಅವರು ಪ್ರಾರ್ಥಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!