LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಕುತಂತ್ರ: ಸಿಎಂ ಡಿ ಕೆ ಶಿವಕುಮಾರ್ ಆರೋಪ

ಬೆಂಗಳೂರು : "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ ಶಕ್ತಿಗಳ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ಎಚ್ಚರಿಕೆಯಿಂದ ಇರಿ ಎಂದು ಪೋಲೀಸರಿಗೆ ಸೂಚಿಸಿದ್ದೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಗಣೇಶೋತ್ಸವ ಆಚರಣೆಗೆ ಸರ್ಕಾರ ಅನೇಕ ನಿರ್ಬಂಧ ಹೇರಿದೆ ಎಂಬ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ಈ ವಿಚಾರದಲ್ಲಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ. ಗಣೇಶ ಹಬ್ಬವನ್ನು ಬಹಳ ಶಾಂತಿಯುತವಾಗಿ ಆಚರಣೆ ಮಾಡಬೇಕು. ಮೆರವಣಿಗೆ ಹೋಗುವಾಗ ಶಿಸ್ತು ಪಾಲನೆ ಆಗಬೇಕು, ವಿದ್ಯುತ್ ಕಂಬ, ತಂತಿಗಳ ಬಗ್ಗೆ ಎಚ್ಚರ ವಹಿಸಬೇಕು" ಎಂದರು.

"ಅವರು ಏನಾದರೂ ಮಾಡಲಿ. ಗಣೇಶ ಬಿಜೆಪಿಯವರ ಆಸ್ತಿಯಲ್ಲ. ಬಾಲಗಂಗಾಧರ ತಿಲಕರು ಆರಂಭಿಸಿದ ಆಚರಣೆ ನಡೆದುಕೊಂಡು ಬರುತ್ತಿದೆ. ನಾವು ಹಬ್ಬಕ್ಕೆ ರಜೆ ನೀಡಿ, ಹಬ್ಬ ಆಚರಣೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ.

ಅಶೋಕ್ ಅವರು ಮೈಸೂರಿನ ಟಿ ನರಸೀಪುರ ಪೊಲೀಸ್ ಠಾಣೆಗೆ ಹೋಗುತ್ತಿದ್ದಾರೆ ಎಂದು ಕೇಳಿದಾಗ, "ಅವರು ಎಲ್ಲಿಗಾದರೂ ಹೋಗಲಿ. ಏನಾದರೂ ಮಾಡಲಿ. ಸುಳ್ಳೇ ಬಿಜೆಪಿಯವರ ಮನೆ ದೇವರು. ಪೊಲೀಸ್ ಠಾಣೆಗೆ ಯಾಕೆ ಹೋಗುತ್ತಿದ್ದಾರೆ? ಇಲ್ಲದ ವಿಚಾರ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಗೃಹ ಸಚಿವರಾಗಿದ್ದವರು. ಅವರ ಪರಿಮಿತಿ ಏನು ಎಂದು ಅರಿಯಲಿ" ಎಂದು ತಿರುಗೇಟು ನೀಡಿದರು.

ಅಧಿಕಾರ ದುರುಪಯೋಗ ಮಾಡಿಕೊಂಡು ಯಾರಿಗೂ ನಿರ್ಬಂಧ ಹೇರಲ್ಲ:

"ನಾವು ಬಿಜೆಪಿಯವರ ಸಭೆಗಳಿಗೆ ನಿಯಂತ್ರಣ ಹಾಕುವುದಿಲ್ಲ. ಅವರು ಕಾನೂನು ಚೌಕಟ್ಟಿನಲ್ಲಿ ಎಲ್ಲಿ ಬೇಕಾದರೂ ತಮ್ಮ ರಾಜಕೀಯ ಸಭೆ ಮಾಡಬಹುದು. ಬಿಜೆಪಿ ಅಧ್ಯಕ್ಷರು ಅನಗತ್ಯವಾಗಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಕಾನೂನು ವ್ಯಾಪ್ತಿಯಲ್ಲಿ ಅವರು ಏನಾದರೂ ಮಾಡಬಹುದು, ಏನಾದರೂ ಹೇಳಬಹುದು. ಅವರು ಯಾವ ಮೈದಾನದಲ್ಲಿ ಕಾರ್ಯಕ್ರಮ ಮಾಡಿದರೂ ಅವರಿಗೆ ಅನುಮತಿ ನೀಡಿ ಎಂದು ನಾನೇ ಹೇಳಿರುವೆ. ಅಧಿಕಾರ ದುರುಪಯೋಗ ಮಾಡಿಕೊಂಡು ಯಾರಿಗೂ ನಿರ್ಬಂಧ ಹೇರುವುದಿಲ್ಲ. ಅದು ನಮ್ಮ ಕಾರ್ಯವೈಖರಿಯಲ್ಲ" ಎಂದು ಸ್ಪಷ್ಟಪಡಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!