LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸೈನಿಕನಿಗೆ ಜಾತಿ ಪ್ರಮಾಣಪತ್ರ ನಿರಾಕರಣೆ: 'ಪ್ರಜಾ ಸೇವೆ' ಸಭೆಯಲ್ಲೇ ಜನಾಕ್ರೋಶ, ಕಂದಾಯ ನಿರೀಕ್ಷಕ ವಾಕ್‌ಔಟ್!

ಚಿಕ್ಕಮಗಳೂರು: ಎರಡು ದಶಕಗಳ ಕಾಲ ಗಡಿಯಲ್ಲಿ ದೇಶ ಕಾಯ್ದು ನಿವೃತ್ತರಾದ ಯೋಧನೊಬ್ಬನಿಗೆ ನಿಯಮಾನುಸಾರ ಸಿಗಬೇಕಾದ ಜಾತಿ ಪ್ರಮಾಣಪತ್ರ ನೀಡದೆ ಸತಾಯಿಸುತ್ತಿರುವ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ತಾಲೂಕಿನಲ್ಲಿ ಭಾರಿ ಜನಾಕ್ರೋಶ ವ್ಯಕ್ತವಾಗಿದೆ. ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ 'ಪ್ರಜಾ ಸೇವೆ' ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿ, ಅಧಿಕಾರಿಗಳ ಉದ್ಧಟತನ ತೀವ್ರ ಗದ್ದಲಕ್ಕೆ ಕಾರಣವಾಯಿತು.

ಸಭೆಯಲ್ಲಿ ನಡೆದಿದ್ದೇನು?

ಪ್ರಜಾ ಸೇವೆ ಸಭೆಯಲ್ಲಿ ಮುಖಂಡ ಸುಧೀರ್ ಕುಮಾರ್ ಮುರೊಳ್ಳಿ ಅವರು ನಿವೃತ್ತ ಯೋಧನ ಸಮಸ್ಯೆಯನ್ನು ಪ್ರಸ್ತಾಪಿಸಿದರು. "20 ವರ್ಷ ಸೇನೆ ಸಲ್ಲಿಸಿದ ಯೋಧನಿಗೆ ಯಾವ ನಿಯಮದಡಿ ಜಾತಿ ಪ್ರಮಾಣಪತ್ರ ನಿರಾಕರಿಸಲಾಗಿದೆ?" ಎಂದು ತಹಸೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರನ್ನು (ಆರ್‌ಐ) ನೇರವಾಗಿ ಪ್ರಶ್ನಿಸಿ, ಸಾರ್ವಜನಿಕರ ನ್ಯಾಯಯುತ ಕೆಲಸಗಳನ್ನು ವಿಳಂಬ ಮಾಡುತ್ತಿರುವ ಬಗ್ಗೆ ಕಟುವಾಗಿ ತರಾಟೆಗೆ ತೆಗೆದುಕೊಂಡರು.

ಆರ್‌ಐ ಉದ್ಧಟತನ, ಶಾಸಕರ ಗರಂ:

ಸಭೆಯಲ್ಲಿದ್ದ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸರಣಿ ಪ್ರಶ್ನೆಗಳಿಗೆ ಉತ್ತರಿಸಲು ತಿಣುಕಾಡಿದ ಕಂದಾಯ ನಿರೀಕ್ಷಕ, ಸಮಜಾಯಿಷಿ ನೀಡುವ ಬದಲು ಸಭೆಯಲ್ಲಿದ್ದ ಶಾಸಕರ ಬಳಿಯೇ "ಬೇಕಿದ್ದರೆ ನನ್ನನ್ನೇ ಅಮಾನತು ಮಾಡಿ" ಎಂದು ದುರಹಂಕಾರದ ಮಾತುಗಳನ್ನಾಡಿ ಅರ್ಧದಲ್ಲೇ ಸಭೆಯಿಂದ ಹೊರನಡೆದರು. ಅಧಿಕಾರಿಯ ಈ ಅಶಿಸ್ತಿನ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರೆ, ಶಾಸಕರು ಸದರಿ ಅಧಿಕಾರಿಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವೈಯಕ್ತಿಕ ದ್ವೇಷದ ಆರೋಪ:

ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಸ್ಥಳೀಯ ತಹಸೀಲ್ದಾರ್ ಕಾರ್ಯವೈಖರಿಯೂ ತೀವ್ರ ಟೀಕೆಗೆ ಗುರಿಯಾಯಿತು. ತಹಸೀಲ್ದಾರ್ ಅವರು ಯೋಧನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ಉದ್ದೇಶಪೂರ್ವಕವಾಗಿ ಕಡತವನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಬಹಿರಂಗವಾಗಿಯೇ ಆರೋಪಿಸಿದರು.

ದೇಶ ಸೇವೆ ಮಾಡಿದ ಯೋಧನೇ ತನ್ನ ಹಕ್ಕಿನ ದಾಖಲೆಗಾಗಿ ಕಚೇರಿಗಳಿಗೆ ಅಲೆದಾಡುವ ದುಸ್ಥಿತಿ ನಿರ್ಮಾಣವಾಗಿರುವುದು ಆಡಳಿತ ಯಂತ್ರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದ್ದು, ಇಂತಹ ಅಧಿಕಾರಿಗಳ ಮೇಲೆ ನಿಯಂತ್ರಣವಿಲ್ಲದಿರುವುದು ಯಾರ ವೈಫಲ್ಯ ಎಂಬ ಪ್ರಶ್ನೆ ಸ್ಥಳೀಯರಲ್ಲಿ ವ್ಯಾಪಕವಾಗಿ ಎದ್ದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್