LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಡಿನ ಸಮಸ್ತ ಜನತೆಗೆ ಗೌರಿ, ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : "ರಾಜ್ಯದ ಸಮಸ್ತ ಜನರಿಗೆ ಹಾಗೂ ಎಲ್ಲಾ ಗ್ಯಾರಂಟಿ ಫಲಾನುಭವಿಗಳಿಗೆ ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

"ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಯ ಮೂಲಕ ರಾಜ್ಯದ ಕೋಟ್ಯಂತರ ಮನೆಗಳಲ್ಲಿ ಬೆಳಕು ಮೂಡುತ್ತಿದೆ. ಇದೇ ಬೆಳಕಿನಲ್ಲಿ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿ. ರಾಜ್ಯದ ಪ್ರತಿಯೊಂದು ಮನೆಯಲ್ಲೂ ಸುಖ, ಶಾಂತಿ, ನೆಮ್ಮದಿ ಹಾಗೂ ಸಂತೋಷದ ಬೆಳಕು ತುಂಬಲಿ. ಎಲ್ಲ ಕುಟುಂಬಗಳಲ್ಲಿ ಸಂತಸ ಹಾಗೂ ನೆಮ್ಮದಿ ನೆಲೆಸಲಿ" ಎಂದು ಹಾರೈಸಿದರು.

"ಹಬ್ಬಗಳು ನಾಡಿನ ಪ್ರತಿಯೊಂದು ಕುಟುಂಬಕ್ಕೂ ಹೊಸ ಭರವಸೆ. ಗೌರಿ- ಗಣೇಶ ಹಬ್ಬ ಒಂದೇ ದಿನ ಬಂದಿದೆ. ವಿಘ್ನ ವಿನಾಯಕನ ಆಶೀರ್ವಾದದಿಂದ ಜನರ ಸಂಕಷ್ಟಗಳು ದೂರವಾಗಿ, ಸುಖ- ಶಾಂತಿ ನೆಲೆಸಲಿ. ಗಣೇಶನಗಿಂತ ಮೊದಲು ಗೌರಿಯನ್ನು ಪೂಜಿಸುತ್ತೇವೆ. ಗೌರಿ ಸಮಾನರಾದ ಎಲ್ಲಾ ತಾಯಂದಿರಿಗೂ ಹಬ್ಬದ ಶುಭಾಶಯಗಳು" ಎಂದರು‌.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?