LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ತಳಮಟ್ಟದಿಂದ ಮತ್ತಷ್ಟು ಚುರುಕುಗೊಳಿಸಲು ಮತ್ತು ಬೂತ್ ಮಟ್ಟದವರೆಗೂ ನಿರಂತರ ಸಂಪರ್ಕ ಜಾಲ ರೂಪಿಸಲು ನೂತನ ಪರಿಕಲ್ಪನೆಯ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪಿಸಲಾಗಿದ್ದು, ಈ ಕೇಂದ್ರದ ನಿರ್ವಹಣೆಗೆ ಪ್ರಮುಖ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ) ದೇಶಾದ್ಯಂತ ಪಕ್ಷವನ್ನು ಬಲಪಡಿಸಲು ಆರಂಭಿಸಿರುವ ‘ಕನೆಕ್ಟ್ ಕಾಂಗ್ರೆಸ್ ಸೆಂಟರ್’ ಮಾದರಿಯಲ್ಲೇ ಕರ್ನಾಟಕದಲ್ಲೂ ಈ ವಿಶೇಷ ಕೇಂದ್ರವನ್ನು ಸಜ್ಜುಗೊಳಿಸಲಾಗಿದೆ.

ರಾಜ್ಯ ಮಟ್ಟದಿಂದ ಹಿಡಿದು ಬೂತ್ ಮಟ್ಟದವರೆಗಿನ ನಾಯಕರೊಂದಿಗೆ ಸೌಹಾರ್ದಯುತ ಸಮನ್ವಯ ಕಾಯ್ದುಕೊಳ್ಳುವುದು, ನಿರಂತರ ಸಂವಹನ ನಡೆಸುವುದು ಹಾಗೂ ಅಗತ್ಯ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಮುನ್ನಡೆಸುವುದು ಈ ಕೇಂದ್ರದ ಮುಖ್ಯ ಉದ್ದೇಶವಾಗಿದೆ.

ನೇಮಕಗೊಂಡ ನೂತನ ಪದಾಧಿಕಾರಿಗಳು:

  • ಅಧ್ಯಕ್ಷರು: ಸಿ. ಬಿ. ಶಶಿಧರ್ (ಟುಡಾ), ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ (ತಿಪಟೂರು, ತುಮಕೂರು ಜಿಲ್ಲೆ)

  • ಸಹ-ಅಧ್ಯಕ್ಷರು: ಕಿರಣ್ ಜಿತ್ ಎಸ್. ಎಂ. (ಡಾಲರ್ಸ್ ಕಾಲೋನಿ, ಬೆಂಗಳೂರು)

  • ಸಂಚಾಲಕರು: ಶ್ರೀಮತಿ ವಸಂತ ಕವಿತ (ಕೆ.ಸಿ.ರೆಡ್ಡಿ) (ಸದಾಶಿವನಗರ, ಬೆಂಗಳೂರು)

  • ಸಂಚಾಲಕರು: ಧ್ರುವ ಜತ್ತಿ (ಸದಾಶಿವನಗರ, ಬೆಂಗಳೂರು ಉತ್ತರ)

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅನುಮೋದನೆಯೊಂದಿಗೆ ಈ ಆದೇಶ ಹೊರಬಿದ್ದಿದ್ದು, ನೂತನ ತಂಡವು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ನಡುವಿನ ಕೊಂಡಿಯಾಗಿ ಕೆಲಸ ನಿರ್ವಹಿಸಲಿದೆ.

news_1789309328_0_203.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!