LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂ

ರಾಮನಗರ: ಕನಕಪುರದಲ್ಲಿ ನಾಳೆ ನಡೆಯಲಿರುವ ಕುಟುಂಬದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಇಂದು ಕನಕಪುರದ ತಮ್ಮ ನಿವಾಸಕ್ಕೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಮಾರ್ಗಮಧ್ಯೆ ಕನಕಪುರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (ಬಿಸಿಎಂ) ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ನೀಡಿ ಅಚ್ಚರಿ ಮೂಡಿಸಿದರು. ಯಾವುದೇ ಮುನ್ಸೂಚನೆ ಇಲ್ಲದೆ ಹಾಸ್ಟೆಲ್‌ಗೆ ಆಗಮಿಸಿದ ಸಿಎಂ, ಅಲ್ಲಿನ ಮೂಲಸೌಕರ್ಯ ಹಾಗೂ ಶೈಕ್ಷಣಿಕ ವಾತಾವರಣವನ್ನು ಖುದ್ದಾಗಿ ಪರಿಶೀಲನೆ ನಡೆಸಿದರು.

ಹಾಸ್ಟೆಲ್‌ನಲ್ಲಿದ್ದ ವ್ಯವಸ್ಥೆಗಳ ಕುರಿತು ಸ್ವತಃ ವಿದ್ಯಾರ್ಥಿಗಳಿಂದಲೇ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಬಳಿಕ ವಿದ್ಯಾರ್ಥಿಗಳೊಂದಿಗೆ ಕುಳಿತು ರಾಗಿಮುದ್ದೆ ಊಟ ಸವಿದರು. ಊಟ ಮಾಡುವ ವೇಳೆ ವಿದ್ಯಾರ್ಥಿಗಳ ಕ್ಷೇಮಸಮಾಚಾರ ವಿಚಾರಿಸಿ, ಹಾಸ್ಟೆಲ್‌ನಲ್ಲಿ ಸಿಗುತ್ತಿರುವ ಊಟದ ಗುಣಮಟ್ಟ ಮತ್ತು ಇತರ ಸೌಲಭ್ಯಗಳ ಬಗ್ಗೆ ಮುಕ್ತವಾಗಿ ಮಾತುಕತೆ ನಡೆಸಿದರು.

ಸಿಎಂ ಅವರ ಈ ಅನಿರೀಕ್ಷಿತ ಭೇಟಿಯ ವೇಳೆ ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲೆಯ ಹಲವು ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದು, ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಊಟದ ನಂತರ ಕನಕಪುರದ ತಮ್ಮ ನಿವಾಸಕ್ಕೆ ತೆರಳಿದ ಡಿ.ಕೆ. ಶಿವಕುಮಾರ್ ಅವರು ಇಂದು ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!