LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿಗರೇ ಎಲ್ಲೆಂದರಲ್ಲಿ ಕಸ ಹಾಕೋ ಮುನ್ನ ಇರಲಿ ಎಚ್ಚರ : ಸೇಫ್ ಸಿಟಿ ಯೋಜನೆಯಡಿಯಲ್ಲಿ ಸಿಸಿಟಿವಿ ಅಳವಡಿಕೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಹಾಕುವವರಿಗೆ ಇನ್ಮುಂದೆ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಬೀಳಲಿದೆ. ನಗರದಲ್ಲಿ ಕಸ ಹಾಕುವವರ ಮೇಲೆ ನಿಗಾ ಇಡಲು ಜಿಬಿಎ (GBA) ಮುಂದಾಗಿದ್ದು, ಸೇಫ್ ಸಿಟಿ ಯೋಜನೆಯಡಿ (Safe City Project) ಮತ್ತಷ್ಟು ಸಿಸಿಟಿವಿ (CCTV) ಕ್ಯಾಮೆರಾಗಳನ್ನ ಅಳವಡಿಸಲು ಪ್ಲಾನ್ ಮಾಡಿದೆ. ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಯೋಜನೆಯನ್ನ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಿದ್ಧತೆ ನಡೆಸಿದೆ.

ಬೆಂಗಳೂರಿನಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆಗೆ ಮತ್ತಷ್ಟು ಆದ್ಯತೆ ನೀಡಲು ಜಿಬಿಎ ಮುಂದಾಗಿದೆ. ನಗರದ ಹಲವೆಡೆ ಎಲ್ಲೆಂದರಲ್ಲಿ ಕಸ ಹಾಕುವವರ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಸಲು ಯೋಜನೆ ರೂಪಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರನ್ನ ಗುರುತಿಸಿ, ನಗರದ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗುತ್ತಿದೆ. ಇನ್ನೂ ಜಿಬಿಎ ವ್ಯಾಪ್ತಿಯಲ್ಲಿ 7 ಸಾವಿರಕ್ಕೂ ಅಧಿಕ ಸಿಸಿಟಿವಿಗಳನ್ನ ಸರ್ಕಾರದ ವತಿಯಿಂದ ಆಳವಡಿಕೆ ಮಾಡಲಾಗಿದೆ. 

ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಸೇಫ್ ಸಿಟಿ ಯೋಜನೆಯನ್ನ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಜಿಬಿಎ ಪ್ಲಾನ್ ಮಾಡಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು ಹೆಚ್ಚಿಸುವ ಮೂಲಕ ಸಾರ್ವಜನಿಕರ ಸುರಕ್ಷತೆಗೆ ಒತ್ತು ನೀಡಲು ಮುಂದಾಗಿದೆ. ಬೆಂಗಳೂರಿನಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆ ಎರಡಕ್ಕೂ ಆದ್ಯತೆ ನೀಡಲಾಗುತ್ತಿದೆ. ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಸೇಫ್ ಸಿಟಿ ಯೋಜನೆಯನ್ನ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸೋದಕ್ಕೆ ಸಚಿವರು ಕೂಡ ತಿಳಿಸಿದ್ದಾರೆ.

ಪೊಲೀಸರ ನಿಗಾದಲ್ಲಿ ಸಿಸಿಟಿವಿಗಳು ಇರಲಿದ್ದು, ಅಗತ್ಯವಿರುವ ಕಡೆ ಇನ್ನೂ ಹೆಚ್ಚಿನ ಸಿಸಿಟಿವಿ ಅಳವಡಿಕೆ ಮಾಡಲು ಪ್ಲಾನ್ ಮಾಡಲಾಗುತ್ತಿದೆ ಎಂದು ಜಿಬಿಎ ಆಯುಕ್ತರು ಹೇಳಿದ್ದಾರೆ. ಒಟ್ಟಿನಲ್ಲಿ ಬೆಂಗಳೂರಿನ ಸ್ವಚ್ಛತೆ ಹಾಗೂ ಸುರಕ್ಷತೆಗೆ ಜಿಬಿಎ ಹೊಸ ಹೆಜ್ಜೆ ಇಡಲು ಮುಂದಾಗಿದೆ. ಕಸ ಹಾಕುವವರಿಗೆ ಕ್ಯಾಮೆರಾ ಕಣ್ಣು ಬೀಳಲಿದ್ದು, ಮಹಿಳೆಯರ ಸುರಕ್ಷತೆಗೂ ಸಿಸಿಟಿವಿ ಕಣ್ಗಾವಲು ಹೆಚ್ಚಾಗಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!