LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ಗಜಪಡೆಗೆ ವಿಶೇಷ ಪೂಜೆ : ದಸರಾದಲ್ಲಿ ಎರಡು ದಿನ ಕಂಬಳ ಆಯೋಜನೆ, ಮೈಸೂರು ಡಿಸಿ

ಮೈಸೂರು : ಈ ಬಾರಿ ನಾಡಹಬ್ಬ ದಸರಾದಲ್ಲಿ ಎರಡು ದಿನಗಳ ಕಾಲ ಕಂಬಳ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಎರಡು ದಿನಗಳ ಕಾಲ ಹಗಲು ರಾತ್ರಿ ಸತತವಾಗಿ ಕಂಬಳ ನಡೆಯಲಿದ್ದು, ಒಟ್ಟು 8 ಸಾವಿರ ಜನ ಕುಳಿತು ಕಂಬಳ ವೀಕ್ಷಿಸಲು ಆಸನದ ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಇನ್ನೊಂದು ವಾರದಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡುತ್ತೇವೆ. ದಸರಾ ಗೋಲ್ಡ್ ಕಾರ್ಡ್​ಗಳ ಬೆಲೆ ಏರಿಕೆ ಮಾಡಿಲ್ಲ. ಜೊತೆಗೆ ದಕ್ಷಿಣ ಭಾರತದ ಸಿಎಂಗಳು ದಸರಾಗೆ ಆಗಮಿಸುವ ವಿಚಾರದ ಬಗ್ಗೆ ಸಿಎಂ ಅಧಿಕೃತವಾಗಿ ಹೇಳಲಿದ್ದಾರೆ ಎಂದರು. ಏರ್ ಶೋ ವಿಚಾರದಲ್ಲಿ ಪತ್ರ ವ್ಯವಹಾರ ಮಾಡಿದ್ದೇವೆ‌. ಇನ್ನೂ ಕೇಂದ್ರದಿಂದ ನಮಗೆ ಒಪ್ಪಿಗೆ ಪತ್ರವನ್ನು ಕೊಟ್ಟಿಲ್ಲ. ಇನ್ನೂ ಇದಕ್ಕೆ ಸಮಯ ಇದೆ. ಈ ಬಾರಿ ಮೆರವಣಿಗೆಯಲ್ಲಿ ಖ್ಯಾತ ಸಿನಿಮಾ ನಟರು, ನಿರ್ದೇಶಕರು ಭಾಗಿಯಾಗುತ್ತಾರೆ ಎಂದು ಡಿಸಿ ಮಾಹಿತಿ ನೀಡಿದರು.

ಗಜಪಡೆಗೆ ವಿಶೇಷ ಪೂಜೆ 

ದೇಶಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಆಗಮಿಸಿರುವ 12 ದಸರಾ ಆನೆಗಳಿಗೆ ಅರಮನೆ ಮುಂಭಾಗದಲ್ಲಿ ಇಂದು ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಅರಮನೆ ಮುಂಭಾಗದ ಗಜಪಡೆಯ ಶೆಡ್ ಪಕ್ಕದಲ್ಲಿರುವ ಮೈದಾನದಲ್ಲಿ ದಸರಾ ಆನೆಗಳನ್ನು ಸಾಲಾಗಿ ನಿಲ್ಲಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಾಡಿನ ಜನರಿಗೆ ನೈಜ ಸ್ವರೂಪಿ ಗಣೇಶನಾದ ಗಜಪಡೆ ತನ್ನ ಸೊಂಡಿಲನ್ನು ಎತ್ತಿ ಶುಭಾಶಯ ತಿಳಿಸಿದ್ದು ವಿಶೇಷವಾಗಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!