LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ದಾರುಣ ಸಾವು

ಮಂಡ್ಯ: ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಾಲಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಬ್ಬದ ಸಂಭ್ರಮ ಮುಗಿಸಿ ರಾಜಧಾನಿ ಬೆಂಗಳೂರಿಗೆ ಮರಳುತ್ತಿದ್ದ ಕುಟುಂಬ ದುರಂತ ಅಂತ್ಯ ಕಂಡಿದೆ.

​ಬೆಂಗಳೂರು ಮೂಲದ ಮುತ್ತುರಾಜ್ (35), ಅವರ ಪತ್ನಿ ಕಾವ್ಯ (30) ಹಾಗೂ ಎಂಟು ವರ್ಷದ ಪುತ್ರಿ ಕೀರ್ತನಾ ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದುರ್ದೈವಿಗಳು. ದಂಪತಿಯ ಮತ್ತೊಂದು ಮಗುವಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾದ ಆ ಮಗುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

​ಹಬ್ಬ ಮುಗಿಸಿ ಮರಳುವಾಗ ಎದುರಾಯ್ತು ಸಾವು

​ಗೌರಿ-ಗಣೇಶ ಹಬ್ಬದ ರಜೆಯ ಹಿನ್ನೆಲೆಯಲ್ಲಿ ಈ ಕುಟುಂಬ ಊರಿಗೆ ಆಗಮಿಸಿತ್ತು. ಹಬ್ಬದ ಎಲ್ಲಾ ಸಂಭ್ರಮಗಳನ್ನು ಮುಗಿಸಿಕೊಂಡು ಇಂದು ಮುಂಜಾನೆ ಬೈಕ್‌ನಲ್ಲಿ ಬೆಂಗಳೂರಿಗೆ ವಾಪಸ್ ಪ್ರಯಾಣ ಬೆಳೆಸಿದ್ದರು. ಆದರೆ, ಕೊಪ್ಪ ಗ್ರಾಮದ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನಜ್ಜುಗುಜ್ಜಾಗಿದ್ದು, ದಂಪತಿ ಹಾಗೂ ಹೆಣ್ಣು ಮಗು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆದಿದ್ದಾರೆ.

​ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ

​ಘಟನಾ ಸ್ಥಳಕ್ಕೆ ಕೊಪ್ಪ ಠಾಣೆಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಬ್ಬದ ಖುಷಿಯಲ್ಲಿದ್ದ ಕುಟುಂಬವು ಕೆಲವೇ ಕ್ಷಣಗಳಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿರುವುದು ಸ್ಥಳೀಯರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.

ವರದಿ: ಗಿರೀಶ್ ರಾಜ್, ಮಂಡ್ಯ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!