LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರದಲ್ಲಿ ಗಣೇಶ ಮೂರ್ತಿ ಸಾಗಿಸುವಾಗ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿ - ಇಬ್ಬರಿಗೆ ಗಂಭೀರ ಗಾಯ

ವಿಜಯನಗರ (ಹೊಸಪೇಟೆ): ಗಣೇಶ ಮೂರ್ತಿಯನ್ನು ಸಾಗಿಸುತ್ತಿದ್ದ ವೇಳೆ ತಂತಿಗೆ ಬಿದಿರು ತಗುಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಇಬ್ಬರು ಗಾಯಗೊಂಡಿರುವ ದುರ್ಘಟನೆ ಹೊಸಪೇಟೆ ನಗರದ ಅನಂತಶಯನಗುಡಿ ಹೊರವಲಯದಲ್ಲಿ ಸೋಮವಾರ ನಡೆದಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು, ವಿದ್ಯುತ್ ಪ್ರವಹಿಸಿದರೂ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಮಲಾಪುರ ಮೂಲದ ಹುಲುಗಪ್ಪ ಹಾಗೂ ದೀಪಕ್ ವಿದ್ಯುತ್ ಆಘಾತಕ್ಕೊಳಗಾದ ಗಾಯಾಳುಗಳು. ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದಾಗ ಮೂರ್ತಿಗೆ ಭದ್ರತೆಗಾಗಿ ಅಳವಡಿಸಲಾಗಿದ್ದ ಬಿದಿರು, ರಸ್ತೆಯ ಮೇಲಿದ್ದ ವಿದ್ಯುತ್ ಕಂಬದ ತಂತಿಗೆ ಸ್ಪರ್ಶಿಸಿದೆ. ಇದರಿಂದಾಗಿ ತಕ್ಷಣವೇ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ನಿಯಂತ್ರಣ ಸಿಗದೆ ಟ್ರ್ಯಾಕ್ಟರ್ ಹಾಗೂ ಗಣೇಶ ಮೂರ್ತಿ ಪಕ್ಕದಲ್ಲಿದ್ದ ಕಾಲುವೆಗೆ ಉರುಳಿ ಬಿದ್ದಿವೆ.

ಘಟನೆಯಲ್ಲಿ ಗಾಯಗೊಂಡ ಹುಲುಗಪ್ಪ ಮತ್ತು ದೀಪಕ್ ಅವರನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ತದನಂತರ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ ಗಾಯಾಳುಗಳನ್ನು ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?