LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಐಕಾನ್ ಸ್ಟಾರ್ ರೆಡಿ: ಅಭಿಮಾನಿಗಳಿಗೆ ಡಬಲ್ ಧಮಾಕಾ ಆಫರ್!

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ಮಲಯಾಳಂನ ಪ್ರತಿಭಾವಂತ ನಿರ್ದೇಶಕ ಬಸಿಲ್ ಜೋಸೆಫ್ ಕಾಂಬಿನೇಷನ್‌ನಲ್ಲಿ ಸಿನಿಮಾ ಬರಲಿದೆ ಎಂಬ ಸುದ್ದಿ ಗಾಂಧಿನಗರದಿಂದ ಹಿಡಿದು ಟಾಲಿವುಡ್‌ವರೆಗೆ ಭಾರಿ ಸದ್ದು ಮಾಡುತ್ತಿದೆ. ಕಳೆದ ಕೆಲವು ವರ್ಷಗಳಿಂದ ಇವರಿಬ್ಬರ ನಡುವೆ ಕಥೆಯ ಕುರಿತು ಮಾತುಕತೆಗಳು ನಡೆಯುತ್ತಲೇ ಇದ್ದು, ಇತ್ತೀಚೆಗೆ ಬಸಿಲ್ ಜೋಸೆಫ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಒಂದು ಪೋಸ್ಟ್ ಈ ಕುರಿತ ಸುಳಿವನ್ನು ನೀಡಿದೆ.

ಇನ್ನೊಂದೆಡೆ, ಅಲ್ಲು ಅರ್ಜುನ್ ಒಂದೇ ಚಿತ್ರಕ್ಕಾಗಿ ವರ್ಷಗಟ್ಟಲೆ ಸಮಯ ವ್ಯಯಿಸುತ್ತಿದ್ದಾರೆ ಎಂಬ ಬೇಸರ ಅಭಿಮಾನಿಗಳಲ್ಲಿ ಹಾಗೂ ಚಿತ್ರರಂಗದ ವಲಯದಲ್ಲಿದೆ. ನಟನೆಯ ಉತ್ತುಂಗದಲ್ಲಿರುವ ಈ ಹಂತದಲ್ಲಿ, ಅವರು ಸಾಲು ಸಾಲು ಸಿನಿಮಾಗಳನ್ನು ವೇಗವಾಗಿ ಮುಗಿಸಬೇಕು ಎಂಬುದು ಅವರ ಅಭಿಮಾನಿಗಳ ಬಲವಾದ ಬಯಕೆಯಾಗಿದೆ.

ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಅಲ್ಲು ಅರ್ಜುನ್ ಈಗ ತಮ್ಮ ಕೆಲಸದ ವೇಗವನ್ನು ಹೆಚ್ಚಿಸಲು ಹೊಸ ಹಾದಿ ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಲೋಕೇಶ್ ಕನಕರಾಜ್ ನಿರ್ದೇಶನದ ಚಿತ್ರದ ಪ್ರಮುಖ ಸನ್ನಿವೇಶಗಳ ಶೂಟಿಂಗ್ ಪೂರ್ಣಗೊಳಿಸುತ್ತಿದ್ದಂತೆಯೇ, ಬಸಿಲ್ ಜೋಸೆಫ್ ಅವರ ಚಿತ್ರದ ಚಿತ್ರೀಕರಣದಲ್ಲೂ ಪಾಲ್ಗೊಳ್ಳಲು ಅವರು ಯೋಜನೆ ರೂಪಿಸುತ್ತಿದ್ದಾರೆ. ಈ ರೀತಿಯಾಗಿ ಸಮಾಂತರವಾಗಿ ಶೂಟಿಂಗ್ ನಡೆಸುವುದರಿಂದ ಸಿನಿಮಾಗಳು ಬೇಗನೆ ತೆರೆಗೆ ಬರಲಿದ್ದು, ಚಿತ್ರಮಂದಿರಗಳ ಮಾಲೀಕರಿಗೂ ಹಾಗೂ ಅಭಿಮಾನಿಗಳಿಗೆ ಹೊಸ ಉತ್ಸಾಹ ನೀಡಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?