LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಜ್ಯೋತಿ ಅಕ್ರಮ ತಡೆಗೆ ಮನೆ-ಮನೆ ಪರಿಶೀಲನೆ; ಡೋರ್‌ಲಾಕ್ ಮನೆಗಳಿಗೆ ನೋಟಿಸ್ ಕಡ್ಡಾಯ!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ 'ಗೃಹಜ್ಯೋತಿ' ಯೋಜನೆಯಲ್ಲಿನ ಅಕ್ರಮಗಳನ್ನು ತಡೆಗಟ್ಟಿ, ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ನೈಜ ಲಾಭ ತಲುಪಿಸುವ ನಿಟ್ಟಿನಲ್ಲಿ ಕೊಪ್ಪಳ ನಗರದಾದ್ಯಂತ ಮನೆ-ಮನೆ ಭೇಟಿ ಮರುಪರಿಶೀಲನಾ ಪ್ರಕ್ರಿಯೆ ಚುರುಕುಗೊಂಡಿದೆ.

ನಗರದ ಕುವೆಂಪು ನಗರ ಸೇರಿದಂತೆ ವಿವಿಧ ವಾರ್ಡ್ಗಳಲ್ಲಿ ಪರಿಶೀಲನೆ ಕಾರ್ಯ ಸ್ವಲ್ಪ ವಿಳಂಬವಾಗುತ್ತಿರುವ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಜಿ. ಗೊಂಡಬಾಳ ಅವರು ಸ್ವತಃ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಮಂಜುನಾಥ ಅವರು, "ಕಾಂಗ್ರೆಸ್ ಸರ್ಕಾರವು ಬಡವರ ಹಾಗೂ ಸಮಾಜದ ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದೆ. ಪ್ರತಿವರ್ಷ ಸುಮಾರು 56,000 ಕೋಟಿ ರೂ. ಅನುದಾನವನ್ನು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟು ಜಾರಿಗೆ ತರುತ್ತಿರುವುದು ಅತ್ಯಂತ ಜನಪರ ಹಾಗೂ ಪ್ರಗತಿಪರ ಹೆಜ್ಜೆಯಾಗಿದೆ. ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಅರ್ಹರಿಗೆ ತೊಂದರೆಯಾಗಬಾರದು. ಅದಕ್ಕಾಗಿ ಜೆಸ್ಕಾಂ ಸಿಬ್ಬಂದಿ ನಡೆಸುತಿರುವ ಮರುಪರಿಶೀಲನೆಗೆ ಸಾರ್ವಜನಿಕರು ಹಾಗೂ ಫಲಾನುಭವಿಗಳು ಪೂರ್ಣ ಸಹಕಾರ ನೀಡಬೇಕು" ಎಂದು ವಿನಂತಿಸಿದರು.

ಇದೇ ವೇಳೆ, ಬಾಗಿಲು ಮುಚ್ಚಿರುವ (ಡೋರ್ ಲಾಕ್) ಮನೆಗಳ ಕುರಿತು ಗಮನ ಸೆಳೆದ ಅವರು, ಅಂತಹ ಮನೆಗಳಿಗೆ ಕಡ್ಡಾಯವಾಗಿ ನೋಟಿಸ್ ಅಂಟಿಸಬೇಕು. ಆ ನೋಟಿಸ್‌ನಲ್ಲಿ ಸಂಬಂಧಿಸಿದ ಏರಿಯಾದ ಮೀಟರ್ ರೀಡರ್ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಈ ಭೇಟಿಯ ಸಂದರ್ಭದಲ್ಲಿ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಮೊಟ್ಲಾ ನಾಯ್ಕ, ಎಇಇ ಸೈಯದ್ ಯುನೂಸ್, ಇಲಾಖೆಯ ಸಿಬ್ಬಂದಿಯಾದ ಎಸ್. ಒ. ಹನುಮಂತ ಕಟಗಿ, ಸೀನಿಯರ್ ಲೈನ್‌ಮನ್ ಹನುಮಂತ ಹಳ್ಳಿ, ಮೀಟರ್ ರೀಡರ್ ಹುಲಗೇಶ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್