LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯವರು ಟೆಲಿಪ್ರಾಮ್ಟ್ ಇಲ್ಲದೆ 'ವಂದೇ ಮಾತರಂ' ಪೂರ್ತಿ ಹಾಡಲಿ ಇಂದೇ ರಾಜೀನಾಮೆ ಕೊಡ್ತೇನೆ : ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: 'ವಂದೇ ಮಾತರಂ' ಗೀತೆಯ ಪೂರ್ಣ ಚರಣಗಳನ್ನು ಹಾಡುವಂತೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಶಾಸನಸಭೆ ಹಾಗೂ ಸಾರ್ವಜನಿಕ ವೇದಿಕೆಯಲ್ಲಿ ಕಡಾಖಂಡಿತವಾಗಿ ಬಹಿರಂಗ ಸವಾಲು ಎಸೆದಿದ್ದಾರೆ. "ಬಿಜೆಪಿ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಜವಾಹರ್‌ಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಮತ್ತು ರವೀಂದ್ರನಾಥ್ ಟ್ಯಾಗೋರ್ ಅವರಿಗಿಂತ ದೊಡ್ಡವರೇ? ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ನಾನು ಸವಾಲು ಹಾಕುತ್ತೇನೆ. ಸಾರ್ವಜನಿಕ ಸಭೆಯಲ್ಲಿ ಯಾವುದೇ ಕಾಗದ ಅಥವಾ ಟೆಲಿಪ್ರಾಂಪ್ಟರ್ ನೆರವಿಲ್ಲದೆ ವಂದೇ ಮಾತರಂ ಗೀತೆಯನ್ನು ಪೂರ್ತಿಯಾಗಿ ಹಾಡಿ ತೋರಿಸಲಿ. ಅವರು ಹಾಡಿದರೆ ನಾನೇ ತಕ್ಷಣ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ" ಎಂದು ಗೃಹ ಸಚಿವರು ತಿರುಗೇಟು ನೀಡಿದ್ದಾರೆ.

"ನಮಗೆ ಯಾವಾಗಲೂ ಗೀತೆಯ ಮೊದಲ ಎರಡು ಪ್ಯಾರಾಗಳನ್ನಷ್ಟೇ ಹಾಡಿ ಅಭ್ಯಾಸವಿದ್ದು, ನನಗೂ ಕೊನೆಯ ಸಾಲುಗಳು ಬರುವುದಿಲ್ಲ. ಹೀಗಿರುವಾಗ ಬಿಜೆಪಿಗರು ತಮಗೆ ಪೂರ್ತಿ ಬರುತ್ತದೆ ಎನ್ನುವುದಾದರೆ ಅದನ್ನು ನಿರೂಪಿಸಲಿ" ಎಂದ ಖರ್ಗೆ, ಮುಂಬರುವ ಅಧಿವೇಶನದಲ್ಲಿ ಈ ಕುರಿತು ವಿಶೇಷ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದರು. "ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಸಭಾಧ್ಯಕ್ಷರಲ್ಲಿ ಪ್ರತ್ಯೇಕ ಸಮಯ ಕೇಳುತ್ತೇನೆ. ಬಿಜೆಪಿ ಶಾಸಕರೆಲ್ಲರೂ ಯಾವುದೇ ಕಾಗದದ ನೆರವಿಲ್ಲದೆ ಸಭೆಯಲ್ಲಿ ಪೂರ್ಣ ವಂದೇ ಮಾತರಂ ಹಾಡಲಿ, ಅವರು ಹೇಗೆ ಹಾಡುತ್ತಾರೆ ಎಂಬುದನ್ನು ನಾವೂ ನೋಡುತ್ತೇವೆ" ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್