LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಡಿಸಿಎಂ

ಬೆಂಗಳೂರು: ಬೇರೆ ಊರುಗಳಿಗೆ ಸ್ಥಳಾಂತರಗೊಂಡು ನೆಲೆಸಿರುವ ಜನರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗೊಳಿಯಬಾರದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಸೂಚನೆ ನೀಡಿದರು.

ಇಂದು ವಿಧಾನಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ರಾಜ್ಯದಾದ್ಯಂತ 43.81 ಲಕ್ಷ ಮತದಾರರ ಮ್ಯಾಪಿಂಗ್ ಆಗಿಲ್ಲ. ಹೆಸರು ತಿದ್ದುಪಡಿ ಸೇರಿದಂತೆ ಇನ್ನಿತರ ವಿಚಾರಗಳಿಗೆ ನೋಟಿಸ್ ನೀಡಲಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

ಶಾಶ್ವತ ನಿವಾಸಿಗಳ ಸರ್ಟಿಫಿಕೇಟ್ (ಪಿಆರ್‌ಸಿ) ನೀಡುವ ಪ್ರಕ್ರಿಯೆಯಲ್ಲಿ ವಿಳಂಬವಾಗಬಾರದು. ಅರ್ಜಿ ನಮೂನೆ 6 ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಕಾರಣಾಂತರಗಳಿಂದ ಊರು ತೊರೆದು ಹಲವು ವರ್ಷಗಳಿಂದ ಬೇರೆ ಕಡೆ ನೆಲೆಸಿರುವ ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆಯೂ ಇರುತ್ತದೆ. ಈ ಬಗ್ಗೆ ನಿರ್ಲಕ್ಷ್ಯವಹಿಸುವುದು ಬೇಡ. ಸ್ಥಳಾಂತರಗೊಂಡಿರುವವರ ಅಗತ್ಯ ಮಾಹಿತಿಯನ್ನು ಎಸ್‌ಐಆರ್ ಪ್ರಕ್ರಿಯೆಯಲ್ಲಿ ದಾಖಲಿಸಬೇಕು ಎಂದು ತಿಳಿಸಿದರು.

ಭಾರತ್ ಜೋಡೋ ಯುವ ಸಂಘದ ನೋಂದಣಿ ಕಾರ್ಯ ತ್ವರಿತಗೊಳಿಸಿ :

ಭಾರತ್ ಜೋಡೋ ಯುವ ಸಂಘ ಮುಖ್ಯಮಂತ್ರಿಯವರ ಕನಸಿನ ಯೋಜನೆಯಾಗಿದೆ. ಸಂಘಗಳ ನೋಂದಣಿ, ಮೆಂಟರ್ಸ್‌ಗಳ ನೇಮಕ ಸೇರಿದಂತೆ ಸಂಘ ಪ್ರಾರಂಭಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು. ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಕೂಡಲೇ ಅರ್ಜಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿಸಬೇಕು. ಭಾರತ್ ಜೋಡೋ ಯುವಕ ಸಂಘ ಇಡೀ ದೇಶದಲ್ಲಿ ಮೊದಲ ಬಾರಿಗೆ ಜಾರಿಗೊಳಿಸುತ್ತಿರುವ ಕಾರ್ಯಕ್ರಮ. ಇದರಿಂದ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಒಳ್ಳೆ ಹೆಸರು ಬರಲಿದೆ ಎಂದರು.

ಪ್ರಜಾಸೇವಾ ಅಭಿಯಾನದಲ್ಲಿ ಬರುವ ಅರ್ಜಿಗಳ ತ್ವರಿತ ವಿಲೇವಾರಿ ಮಾಡಿ :

ಪ್ರಜಾಸೇವಾ ಅಭಿಯಾನದಲ್ಲಿ ಹೆಚ್ಚಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಬರುತ್ತಿವೆ‌. ಪಹಣಿ ತಿದ್ದುಪಡಿ, ಪೋಡಿ, ಪಿಂಚಣಿ ಸಮಸ್ಯೆ ಸೇರಿದಂತೆ ಮುಂತಾದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಆರ್‌ಟಿಸಿ, ಪೋಡಿ ಪ್ರಕರಣಗಳನ್ನು ಸರಳೀಕರಣಗೊಳಿಸಲಾಗಿದೆ. ಆದಾಗ್ಯೂ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳಿಂದ ಅಗತ್ಯ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬಡವರಿಗೆ ನಿವೇಶನ ನಿರ್ಲಕ್ಷ್ಯ ಬೇಡ:

ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಯೋಜನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕೆಲ ಜಿಲ್ಲೆಗಳಲ್ಲಿ ಭೂಮಿ ಗುರುತಿಸುವ ಕೆಲಸ ಆಗಿಲ್ಲ. ನಿವೇಶನ ಸಿದ್ಧಪಡಿಸಲು ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಿಂಗಳಾಂತ್ಯದ ವೇಳೆಗೆ ಪೂರ್ಣಗೊಳಿಸಬೇಕು. ಈ ಬಗ್ಗೆ ನಿರ್ಲಕ್ಷಿಸುವುದು ಬೇಡ. ಹಿರಿಯ ಅಧಿಕಾರಿಗಳು ಟೆಕ್ನಿಕಲ್‌ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್‌ ಕುಮಾರ್ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕಂದಾಯ ಆಯುಕ್ತೆ ಮೀನಾ ನಾಗರಾಜ್, ಭೂ ಮಾಪನ ಮತ್ತು ಭೂ ದಾಖಲೆ‌ ಇಲಾಖೆಯ ಆಯುಕ್ತ ವೆಂಕಟರಾಜ್ ಮುಂತಾದವರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!