LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದುರಂತ: ಎಸ್ಕಲೇಟರ್ ಏರುತ್ತಿದ್ದಾಗಲೇ ಹೃದಯಾಘಾತದಿಂದ ವೃದ್ಧೆ ಸಾವು

ಬೆಂಗಳೂರು: ಕೇರಳದಿಂದ ವಿಮಾನದ ಮೂಲಕ ನಗರಕ್ಕೆ ಬಂದಿಳಿದ ವೃದ್ಧ ಮಹಿಳೆಯೊಬ್ಬರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎಸ್ಕಲೇಟರ್ ಏರುತ್ತಿದ್ದ ಸಂದರ್ಭದಲ್ಲೇ ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಪ್ರಯಾಣ ಮುಗಿಸಿ ಹೊರಬರುವಾಗ ಘಟನೆ

ಕೇರಳದ ಕೋಝಿಕ್ಕೋಡ್ ನಿವಾಸಿ ಶಿವದಾಸ್ ಲತಾ (66) ಮೃತ ದುರ್ದೈವಿ. ಇವರು ಮುಂಜಾನೆ ಆಕಾಶ ಏರ್‌ಲೈನ್ಸ್ ವಿಮಾನದ ಮೂಲಕ ಬೆಂಗಳೂರು ಏರ್‌ಪೋರ್ಟ್‌ಗೆ ಬಂದು ತಲುಪಿದ್ದರು. ಪ್ರಯಾಣ ಮುಗಿಸಿ ವಿಮಾನದಿಂದ ಕೆಳಗಿಳಿದು ನಿಲ್ದಾಣದಿಂದ ಹೊರಬರಲು ಟರ್ಮಿನಲ್-1ರ ಎಸ್ಕಲೇಟರ್ ಏರುತ್ತಿದ್ದ ವೇಳೆ, ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

ಫಲಿಸದ ವೈದ್ಯಕೀಯ ಸಿಬ್ಬಂದಿಯ ರಕ್ಷಣಾ ಪ್ರಯತ್ನ

ಮಹಿಳೆ ಕುಸಿದು ಬೀಳುತ್ತಿದ್ದಂತೆ ಕರ್ತವ್ಯದಲ್ಲಿದ್ದ ಏರ್‌ಪೋರ್ಟ್ ಭದ್ರತಾ ಸಿಬ್ಬಂದಿ ಹಾಗೂ ವೈದ್ಯಕೀಯ ತಂಡ ತಕ್ಷಣವೇ ಕಾರ್ಯಪ್ರವೃತ್ತವಾಯಿತು. ಸ್ಥಳಕ್ಕೆ ಆಂಬುಲೆನ್ಸ್ ತರಿಸಿ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಿಸಲು ಶ್ರಮಿಸಿದರೂ ಯಾವುದೇ ಪ್ರಯೋಜನವಾಗದೆ, ತೀವ್ರ ಹೃದಯಾಘಾತದ ಕಾರಣ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಪೊಲೀಸ್ ಪರಿಶೀಲನೆ, ಪ್ರಕರಣ ದಾಖಲು

ವಿಷಯ ತಿಳಿದ ತಕ್ಷಣ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಹಿಳೆಯ ಕುಟುಂಬದವರಿಗೆ ಮಾಹಿತಿ ಮುಟ್ಟಿಸಲಾಗಿದ್ದು, ಈ ಘಟನೆ ಸಂಬಂಧ ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (UDR) ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?