LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಡಿಸೆಂಬರ್ ಒಳಗೆ ಎಲೆಕ್ಷನ್

ಮಂಗಳೂರು: ಮಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಬೃಹತ್ ಯೋಜನೆಗಳನ್ನು ಪ್ರಕಟಿಸುವುದರ ಜತೆಗೆ, ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಮುಂಬರುವ ಡಿಸೆಂಬರ್ ತಿಂಗಳ ಒಳಗಾಗಿ ರಾಜ್ಯದ ಎಲ್ಲಾ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.

ಇವಿಎಂ ಬದಲು ಬ್ಯಾಲೆಟ್ ಬಾಕ್ಸ್ ಬಳಕೆ: 151.31 ಕೋಟಿ ರೂ. ಬಿಡುಗಡೆ

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಚುನಾವಣಾ ಸಿದ್ಧತೆಗಳ ಕುರಿತು ಅಧಿಕೃತ ಮಾಹಿತಿ ಹಂಚಿಕೊಂಡರು. ರಾಜ್ಯದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಆಡಳಿತಾವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಡಿಸೆಂಬರ್ ಅಂತ್ಯದೊಳಗೆ ಪ್ರಕ್ರಿಯೆ ಮುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಬಾರಿಯ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ (EVM) ಬದಲಾಗಿ ಮತಪೆಟ್ಟಿಗೆಗಳನ್ನು (ಬ್ಯಾಲೆಟ್ ಬಾಕ್ಸ್) ಬಳಸಲು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯವಿರುವ ನೂತನ ಮತಪೆಟ್ಟಿಗೆಗಳ ಖರೀದಿ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಲು ಲೈವ್ ವೆಬ್‌ಕಾಸ್ಟಿಂಗ್ ಸೌಲಭ್ಯ ಕಲ್ಪಿಸಲು 151.31 ಕೋಟಿ ರೂಪಾಯಿಗಳ ಆಡಳಿತಾತ್ಮಕ ವೆಚ್ಚಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಅವರು ತಿಳಿಸಿದರು.

ಚುನಾವಣಾ ಕಣಕ್ಕೆ ಪಕ್ಷ ಸಜ್ಜು: ಕಾಂಗ್ರೆಸ್ ನಾಯಕರಿಂದ ರಣತಂತ್ರ

ಸರ್ಕಾರದ ಮಟ್ಟದಲ್ಲಿ ಚುನಾವಣೆ ನಡೆಸಲು ಹಸಿರು ನಿಶಾನೆ ದೊರೆಯುತ್ತಿದ್ದಂತೆಯೇ, ಇತ್ತ ರಾಜಕೀಯ ಅಖಾಡದಲ್ಲೂ ಚಟುವಟಿಕೆಗಳು ಗರಿಗೆದರಿವೆ. ಸ್ಥಳೀಯ ಸಂಸ್ಥೆಗಳ ಸಮರವನ್ನು ಗಂಭೀರವಾಗಿ ಪರಿಗಣಿಸಿರುವ ಆಡಳಿತಾರೂಢ ಕಾಂಗ್ರೆಸ್, ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ಈಗಾಗಲೇ ಸಿದ್ಧತೆ ಆರಂಭಿಸಿದೆ. ಇತ್ತೀಚೆಗಷ್ಟೇ ನೇಮಕಗೊಂಡಿರುವ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳ (DCC) ಹೊಸ ಅಧ್ಯಕ್ಷರ ಮಹತ್ವದ ಸಭೆಯನ್ನು ಕೆಪಿಸಿಸಿ ಆಯೋಜಿಸಿತ್ತು.

ಈ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಅಗ್ರ ನಾಯಕರು ಭಾಗವಹಿಸಿ ಮಾರ್ಗದರ್ಶನ ನೀಡಿದರು. ವರ್ಷಾಂತ್ಯಕ್ಕೆ ಎದುರಾಗಲಿರುವ ತ್ರಿಕೋನ ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಾಕೀತು ಮಾಡಿದ ಹೈಕಮಾಂಡ್ ನಾಯಕರು, ಬೂತ್ ಮಟ್ಟದಿಂದಲೇ ಪಕ್ಷ ಸಂಘಟನೆ ಚುರುಕುಗೊಳಿಸಲು ಸೂಚಿಸಿದ್ದಾರೆ. ಜನಪ್ರಿಯ ಹಾಗೂ ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಪ್ರಚಾರ ತಂತ್ರಗಳು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಹೊಸ ಜಿಲ್ಲಾಧ್ಯಕ್ಷರಿಗೆ ಸ್ಪಷ್ಟ ಮಾರ್ಗಸೂಚಿ ಮತ್ತು ಗುರಿಗಳನ್ನು ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!