LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ: ಹಾಸ್ಟೆಲ್ ವಿದ್ಯಾರ್ಥಿನಿಗೆ ಅಸಭ್ಯ ವರ್ತನೆ; ಆರೋಪಿ ಬಿಟ್ಟು ರಕ್ಷಣೆಗೆ ಬಂದ ಯುವಕರ ಬಂಧಿಸಿದ ಪೊಲೀಸರು!

ಬಾಗಲಕೋಟೆ: ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ನಡುವೆ ರಸ್ತೆಯಲ್ಲೇ ಖಾಸಗಿ ಅಂಗ ಪ್ರದರ್ಶಿಸಿ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬಾಗಲಕೋಟೆಯ ನವನಗರದ 51ನೇ ಸೆಕ್ಟರ್‌ನಲ್ಲಿ ಸೆಪ್ಟೆಂಬರ್ 17ರಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನವನಗರ ಪೊಲೀಸ್ ಠಾಣೆಯ ಸಿಬ್ಬಂದಿಯ ನಡೆ ತೀವ್ರ ಅನುಮಾನ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಕರಣದ ಮುಖ್ಯ ಆರೋಪಿ ಸುದೀಪ್ ನಾಡಗೌಡ ಎಂಬಾತ ರಸ್ತೆಯಲ್ಲಿ ಹೊರಟಿದ್ದ ವಿದ್ಯಾರ್ಥಿನಿಗೆ ಖಾಸಗಿ ಅಂಗ ತೋರಿಸಿ ವಿಕೃತವಾಗಿ ವರ್ತಿಸಿದ್ದಾನೆ. ಈ ವೇಳೆ ವಿದ್ಯಾರ್ಥಿನಿಯ ಕಷ್ಟಕ್ಕೆ ಧಾವಿಸಿ, ಆಕೆಯ ರಕ್ಷಣೆಗೆ ಬಂದಿದ್ದ ಚೇತನ್ ಕೊಡಬಾಗಿ ಹಾಗೂ ರೋಹನ್ ಹಾದಿಮನಿ ಎಂಬ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಅಸಭ್ಯವಾಗಿ ವರ್ತಿಸಿದ ಮುಖ್ಯ ಆರೋಪಿ ಸುದೀಪ್‌ನನ್ನು ಬಂಧಿಸದೇ, ಚಿಕಿತ್ಸೆಯ ನೆಪವೊಡ್ಡಿ ನವನಗರ ಪೊಲೀಸರು ಆತನನ್ನು ಬಿಟ್ಟುಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೋಲಿಸರ ಈ ವಿಚಿತ್ರ ನಡೆಯ ವಿರುದ್ಧ ಸಂತ್ರಸ್ತ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನನ್ನ ಸಹಾಯಕ್ಕೆ ಬಂದ ಚೇತನ್ ಹಾಗೂ ರೋಹನ್ ಯಾವುದೇ ತಪ್ಪು ಮಾಡಿಲ್ಲ. ಅವರು ನನಗೆ ನೆರವು ನೀಡಲು ಬಂದವರಾಗಿದ್ದು, ತಕ್ಷಣವೇ ಅವರನ್ನು ಬಿಡುಗಡೆ ಮಾಡಬೇಕು. ನಿಜವಾದ ಕಾಮುಕ ಸುದೀಪ್‌ನನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು" ಎಂದು ನೊಂದ ವಿದ್ಯಾರ್ಥಿನಿ ಕಣ್ಣೀರಿಡುತ್ತಾ ಆಗ್ರಹಿಸಿದ್ದಾಳೆ.

ಬಂಧಿತ ಯುವಕರ ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದು, ಅಕ್ರಮವಾಗಿ ಬಂಧಿಸಲಾಗಿರುವ ತಮ್ಮ ಮಕ್ಕಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ರಕ್ಷಣೆಗೆ ಬಂದವರನ್ನೇ ಬಂಧಿಸಿ, ನಿಜವಾದ ಆರೋಪಿಯನ್ನು ರಕ್ಷಿಸುತ್ತಿರುವ ಪೊಲೀಸರ ಕಾರ್ಯವೈಖರಿ ಬಾಗಲಕೋಟೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?