LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಜನರ ಅಭಿಪ್ರಾಯವೇ ನಮ್ಮ ಅಭಿಪ್ರಾಯ : ಸಿಎಂ ಡಿ.ಕೆ. ಶಿವಕುಮಾರ್

ಉಡುಪಿ : ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಜನರ ಅಭಿಪ್ರಾಯವೇ ನಮ್ಮ ಅಭಿಪ್ರಾಯ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತ ಸಾಧಕ-ಬಾಧಕಗಳ ಬಗ್ಗೆ ಸ್ಥಳೀಯರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್  ಅವರು ನಡೆಸಿದ ಸಂವಾದದ ಪ್ರಮುಖಾಂಶಗಳು.

ಕಸ್ತೂರಿ ರಂಗನ್‌ ವರದಿ ವಿಚಾರದಲ್ಲಿ ಜನರ ಭಾವನೆ ತಿಳಿದು ಪರಿಹಾರ ನೀಡಲು ಬಂದಿದ್ದು, ನಿಮ್ಮ ಅಭಿಪ್ರಾಯವೇ ನಮ್ಮ ಅಭಿಪ್ರಾಯವಾಗಲಿದೆ; ಸೆಪ್ಟೆಂಬರ್‌ 27ರ ಒಳಗೆ ನಮ್ಮ ತೀರ್ಮಾನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾಗಿದೆ.

3 ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದ್ದು, ರೈತರು, ಬರಗಾಲ ಹಾಗೂ ಕಸ್ತೂರಿ ರಂಗನ್‌ ವಿಚಾರವಾಗಿ ಚರ್ಚೆ ಮಾಡಲಾಗುವುದು. ಸೋಮವಾರ ಮೊದಲ ದಿನವೇ ಕಸ್ತೂರಿ ರಂಗನ್‌ ವರದಿ ವಿಚಾರ ಚರ್ಚೆ ಮಾಡಲಾಗುವುದು.

ರಾಜ್ಯ ಸರ್ಕಾರವೇ ತಜ್ಞರ ಸಮಿತಿ ರಚಿಸಿ ಭೌತಿಕ ಸಮೀಕ್ಷೆ ನಡೆಸಿ, ಆ ವರದಿಯನ್ನು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ ಹಾಗೂ ಹಸಿರು ನ್ಯಾಯಪೀಠಕ್ಕೆ ಸಲ್ಲಿಸಿ ಮನವರಿಕೆ ಮಾಡಿಕೊಡಬೇಕು ಎಂಬ ಬೇಡಿಕೆಗೆ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.

ಅರಣ್ಯ ಹಕ್ಕು ಕಾಯ್ದೆಯಲ್ಲಿ ಕೆಲವರಿಗೆ 25 ವರ್ಷ ಹಾಗೂ ಉಳಿದವರಿಗೆ 75 ವರ್ಷವಿರುವ ನಿಯಮ ಬದಲಿಸಿ, ಎಲ್ಲರಿಗೂ 25 ವರ್ಷಗಳ ಮಿತಿ ನಿಗದಿ ಮಾಡಲು ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಲಾಗುವುದು; ಅರಣ್ಯವಾಸಿಗಳಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಗರ್‌ ಹುಕುಂ ಸಾಗುವಳಿ ಹಾಗೂ ಉಳುವವನಿಗೆ ಭೂಮಿ ನೀಡಿರುವುದು ನಮ್ಮ ಸರ್ಕಾರ.

https://twitter.com/CMofKarnataka/status/2101261249459957849?s=20

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?