LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಎಫೆಕ್ಟ್: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿ ಪ್ರದೇಶದಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ, ಕರ್ನಾಟಕ ರಾಜ್ಯಾದ್ಯಂತ ಮುಂದಿನ ಏಳು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ರವಾನಿಸಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 24ರವರೆಗೆ ಮಳೆ ಆರ್ಭಟ ಮುಂದುವರಿಯಲಿದ್ದು, ಸುರಕ್ಷತಾ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ 'ಯೆಲ್ಲೋ ಅಲರ್ಟ್' ಜಾರಿಗೊಳಿಸಲಾಗಿದೆ.

ವಿಶೇಷವಾಗಿ ಕರಾವಳಿ ತೀರದ ಜಿಲ್ಲೆಗಳು ಹಾಗೂ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಲಕ್ಷಣಗಳಿರುವುದರಿಂದ ಸಾರ್ವಜನಿಕರು ಹಾಗೂ ರೈತರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕೆ ವಹಿಸಲು ಆಯಾ ಜಿಲ್ಲಾಡಳಿತಗಳಿಗೆ ತಿಳಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!