LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಹೊಸ ನೋಟಿಸ್ ನೀಡದಿರಲು ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

ಶಿವಮೊಗ್ಗ : ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು. ಜೊತೆಗೆ ಹೊಸ ಒತ್ತುವರಿಗೆ ಅವಕಾಶ ನೀಡಬಾರದೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ​ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

 ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿನ ಭಾಗದಲ್ಲಿ ಎದುರಾಗಿರುವ ಆತಂಕಗಳು ಹಾಗೂ ಪರಿಣಾಮಗಳ ಕುರಿತು ಸ್ಥಳೀಯ ರೈತರು, ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳೊಂದಿಗೆ ಶನಿವಾರ ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸಂವಾದ ಮತ್ತು ಬಹಿರಂಗ ಸಭೆಯ ಅಧ್ಯಕ್ಷತೆ ವಹಿಸಿ  ಅವರು ಮಾತನಾಡಿದರು.

 ನಿಮ್ಮ ಭೇಟಿ ಮಾಡಲು ಇದೊಂದು ಅವಕಾಶ. ರೈತರಿಗೆ ಒದಗಿರುವ ಅಪಾಯ ಎದುರಿಸಿವ ಬಗೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಇಲ್ಲಿ ಸೇರಿದ್ದೇವೆ.  ಏನೇ ಆದರೂ ಭೂಮಿಯನ್ನು ರಕ್ಷಣೆ ಮಾಡಿಕೊಳ್ಳಬೇಕು. ನಮಗೂ, ಭೂಮಿ‌ ಮತ್ತು ಪರಿಸರಕ್ಕೆ ನಂಟಿದೆ. ನಿಮ್ಮ‌ಮನೆ ಬಾಗಿಲಿಗೆ ಬಂದು ಚರ್ಚಿಸಿ ನಂತರ ವಿಶೇಷ ಅಧಿವೇಶನ ನಡೆಸಿ ಸ್ಥಳೀಯ ಶಾಸಕರ, ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸಲಾಗುವುದು. ಅದಕ್ಕಾಗಿ ನಿಮ್ಮನ್ನುಹುಡುಕಿಕೊಂಡು ನಾವೇ ನಿಮ್ಮ‌ ಮನೆ ಬಾಗಿಲಿಗೆ ಬಂದಿದ್ದೇವೆ.  ಇಲ್ಲಿ ಇಂದು ಮಳೆ, ಬಿಸಿಲು ಬಂದರೂ ಜನರು, ರೈತರು ಚರ್ಚೆ ವೇಳೆ ಎದ್ದು ಹೋಗಲಿಲ್ಲ. ಬದುಕು ಮುಖ್ಯ. ಸಮಸ್ಯೆಗಳಿಗೆ ಪರಿಹಾರ ಬೇಕು. ಜನರ ಭಾವನೆಗಳ ಮೇಲೆ ಸರ್ಕಾರ ಆಡಳಿತ ಮಾಡಬೇಕು. ಇದೇ ಉದ್ದೇಶದಿಂದ ಜನರೊಂದಿಗೆ ಸಂಪರ್ಕ ಸಾಧಿಸಲು ತಿಂಗಳಿಗೆ ಎರಡು ಬಾರಿ ಉಸ್ತುವಾರಿ ಸಚಿವರು, ಅಧಿಕಾರಿಗಳು ತಾಲ್ಲೂಕು, ಹೋಬಳಿ, ಪಂಚಾಯ್ತಿ ಮಟ್ಟಕ್ಕೆ ಹೋಗಿ ಜನರ ಅಹವಾಲು ಸ್ವೀಕರಿಸಿ, ಪರಿಹಾರ ಒದಗಿಸಲು ಪ್ರಜಾಸೇವಾ ಇಲಾಖೆಯನ್ನು ಆರಂಭಿಸಲಾಗಿದೆ.  ಜನರ ಭಾವನೆ ಅರ್ಥ ಮಾಡಿಕೊಳ್ಳದಿದ್ದರೆ ಜನರ ಸಮಸ್ಯೆ ಅರ್ಥ ಮಾಡಿಕೊಳ್ಳುವುದು ಕಷ್ಟ.ಅದಕ್ಕಾಗಿಯೇ ನಿಮ್ಮ‌ಮನೆ ಬಾಗಿಲಿಗೆ ಸರ್ಕಾರ ಬರಲಿದೆ ಎಂದರು.

ರೈತರು ಪರಿಸರವನ್ನು ಕಾಪಾಡಿಕೊಂಡು ಬಂದಿದ್ದೀರಿ. ನೀವು ವಲಸೆ ಹೋಗಬಾರದು. ಆದ್ದರಿಂದ ಕರಾವಳಿ ಪ್ರದೇಶ 364 ಕಿ.ಮೀ ನೊಂದಿಗೆ  ಮಲೆನಾಡ ನ್ನೂ ಸೇರಿಸಿ ಹೊಸ ಇಕೋ ಟೂರಿಸಂ ಕುರಿತು ಪ್ರವಾಸೋದ್ಯಮ ನೀತಿ ತರಲು ಸಂಪುಟದಲ್ಲಿ  ನಿರ್ಧಾರ ತೆಗೆದುಕೊಳ್ಳಲಾಗಿದೆ.ನಾನು ನಿಮ್ಮ ಜೊತೆ ಇದ್ದೇನೆ. ರೈತರ ಪರವಾಗಿ ಇದ್ದೇನೆ. ಅರಣ್ಯ ಭಾಗದಲ್ಲಿ ಪಾರಂಪರಿಕವಾಗಿ ನಡೆದುಕೊಂಡು ಬಂದವರಿಗೆ ತೊಂದರೆ ಕೊಡಬೇಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

 ಬಗರ್ ಹುಕುಂ, ಉಳುವವನಿಗೆ ಭೂಮಿ ಹಕ್ಕು ತಂದಿದ್ದು ನಮ್ಮ ಪಕ್ಷದ ಸರ್ಕಾರ. ರೈತರನ್ನು ಕಾಪಾಡುವ ಉದ್ದೇಶದಿಂದ ಇಲ್ಲಿ ಬಂದಿದ್ದೇನೆ. ಅಡಿಕೆ ತೆರಿಗೆ ಕಡಿತದ ಬಗ್ಗೆ ಕೇಂದ್ರದೊಂದಿಗೆ ಮಾತನಾಡುವೆ. 94 ಸಿ ವಿಷಯ ಚರ್ಚೆಗೆ ಪ್ರತ್ಯೇಕ ಸಭೆ ಕರೆಯುತ್ತೇನೆ. ಹೊಸದಾಗಿ ಭೌತಿಕ ಸರ್ವೇ, ಇತರೆ ವಿಷಯ ಕುರಿತು ಶಾಸಕರೊಂದಿಗೆ ಚರ್ಚಿಸುತ್ತೇನೆ ಎಂದರು.

ಪರಿಸರ ಸೂಕ್ಷ್ಮ ಪ್ರದೇಶವನ್ನು ರದ್ದುಪಡಿಸುವ ಬಗ್ಗೆ ಕಾನೂನಿನ ವ್ಯಾಪ್ತಿಯನ್ನು ಪರಿಶೀಲಿಸಲಾಗುವುದು ಎಂದ ಅವರು ಅಕ್ರಮ ಸಕ್ರಮ ಕುರಿತು  ಪ್ರತಿ ತಿಂಗಳು ಸಭೆ ನಡೆಸಿ ಬಡವರಿಗೆ ಅನುಕೂಲ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ.ಝೋನಲ್ ಮ್ಯಾನೇಜ್ಮೆಂಟ್ ಪ್ಲಾಂಟೇಷನ್ ಮಾಡಲು, ಸಂಜೀವ್ ಕುಮಾರ್ ವರದಿ ಬಗ್ಗೆ, ೩೭೧ ವಿಶೇಷ ಸ್ಥಾನ ನೀಡುವ ಬಗ್ಗೆ ಸಲಹೆಗಳು ಬಂದಿದ್ದು ಚರ್ಚಿಸುತ್ತೇನೆ. ಹೊಸ ನೋಟಿಸ್ ಯಾವ ರೈತನಿಗೆ ಕೊಡಬಾರದು ಮತ್ತು ಹೊಸ ಒತ್ತುವರಿಗೂ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತೇಗದ ಸಿರಿ: ಈ ಹೊಸ ಯೋಜನೆಯಡಿ ಸರ್ಕಾರಿ ಜಾಗದಲ್ಲಿ‌ ತೇಗ ಬೆಳೆಯಲಾಗುವುದು. ಶೇ. 7೦ ತೇಗ ಬೆಳೆಯುವ ರೈತರಿಗೆ  ಹಾಗೂ, ಶೇ.30 ಸರ್ಕಾರಕ್ಕೆ ಎಂಬ ಅಂಶಗಳನ್ನೊಳಗೊಳ್ಳಲಾಗಿದೆ ಈ ರೀತಿ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನ ಮಾಡಲಾಗುತ್ತಿದೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!