ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಜ್ಯೋತಿ’ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಗ್ರಾಹಕರಿಗೆ ಮತ್ತಷ್ಟು ಸುಲಭಗೊಳಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಮಹತ್ವದ ಕ್ರಮ ಕೈಗೊಂಡಿದೆ. ಅರ್ಹ ಫಲಾನುಭವಿಗಳು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಬೆಸ್ಕಾಂ ಮೀಟರ್ ರೀಡರ್‌ಗಳೇ ನೇರವಾಗಿ ಮನೆ ಬಾಗಿಲಿಗೆ ತೆರಳಿ ದಾಖಲೆಗಳನ್ನು ಪರಿಶೀಲಿಸಿ, ಸ್ಥಳದಲ್ಲೇ ಅರ್ಜಿ ಸಲ್ಲಿಸಲು ನೆರವಾಗಲಿದ್ದಾರೆ.
ಗ್ರಾಹಕರು ತಮ್ಮ ಆಧಾರ್ ಕಾರ್ಡ್, ವಿದ್ಯುತ್ ಬಿಲ್ ಖಾತೆ ಸಂಖ್ಯೆ (Account ID) ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು, ಸ್ಥಳಕ್ಕೆ ಬರುವ ಮೀಟರ್ ರೀಡರ್‌ಗಳಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ಸಂದೇಹ ಪರಿಹಾರಕ್ಕೆ ವಿಶೇಷ ಸಹಾಯವಾಣಿ:
ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದ ಯಾವುದೇ ಗೊಂದಲಗಳು, ದಾಖಲೆ ಪರಿಶೀಲನೆ ಅಥವಾ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆಯಲು ಗ್ರಾಹಕರಿಗಾಗಿ ಬೆಸ್ಕಾಂ ವಿಶೇಷ ಹೆಲ್ಪ್‌ಲೈನ್ ಆರಂಭಿಸಿದೆ. ಈ ಸಹಾಯವಾಣಿಯು ಪ್ರತಿದಿನ ಬೆಳಗ್ಗೆ 6.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.
ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆಗಳು:
9480816111
9480816112
9480816113
9480816114