LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಜಮೀನಿಗೆ ಹೋಗಲು ಕಾಲುದಾರಿ, ಬಂಡಿದಾರಿ ಇಲ್ಲವೇ ? ರೈತರಿಗಾಗಿ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು:  ರಾಜ್ಯದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ನಡೆಸಲು ಹಾಗೂ ಬೆಳೆದ ಬೆಳೆಯನ್ನು ಸಾಗಿಸಲು ಅನುಕೂಲವಾಗುವಂತೆ ಜಮೀನಿನ ಕಾಲುದಾರಿ ಮತ್ತು ಬಂಡಿದಾರಿಗಳ ಅಡೆತಡೆಗಳನ್ನು ತೆರವುಗೊಳಿಸಲು ಕಂದಾಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.  

ಗ್ರಾಮ ನಕಾಶೆಯಲ್ಲಿರುವ ದಾರಿಗಳಲ್ಲಿ ಇತರ ರೈತರು ಓಡಾಡಲು ಅಡ್ಡಿಪಡಿಸುವುದು ಅಥವಾ ದಾರಿಯನ್ನು ಮುಚ್ಚುವ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಅಂತಹ ಅಡೆತಡೆಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ರಾಜ್ಯದ ಎಲ್ಲಾ ತಾಲೂಕುಗಳ ತಹಶೀಲ್ದಾರ್‌ಗಳಿಗೆ ಸರ್ಕಾರ ಆದೇಶಿಸಿದೆ.  

ರೈತರ ಸಂಕಷ್ಟಕ್ಕೆ ಸ್ಪಂದನೆ: ಅಕ್ಕಪಕ್ಕದ ಖಾಸಗಿ ಜಮೀನುಗಳ ಮೂಲಕ ಕೃಷಿ ಸಲಕರಣೆಗಳನ್ನು ಒಯ್ಯಲು ಅಥವಾ ಫಸಲನ್ನು ಹೊರತರಲು ದಾರಿಯಿಲ್ಲದೆ ರೈತರು ನಷ್ಟ ಅನುಭವಿಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  

ಕಾನೂನು ರಕ್ಷಣೆ:

'ಕರ್ನಾಟಕ ಭೂ ಕಂದಾಯ ನಿಯಮಗಳು 1966'ರ ನಿಯಮ 59ರ ಪ್ರಕಾರ ದಾರಿಯ ಹಕ್ಕುಗಳು ಮತ್ತು ಅನುಭೋಗದ ಹಕ್ಕುಗಳನ್ನು ದಾಖಲಿಸಲು ಅವಕಾಶವಿದೆ.  

'ದಿ ಇಂಡಿಯನ್ ಈಸ್‌ಮೆಂಟ್ ಆಕ್ಟ್ 1882' (The Indian Easement Act, 1882) ಅನ್ವಯ ಪ್ರತಿ ಜಮೀನಿನ ಮಾಲೀಕರಿಗೆ ತಮ್ಮ ಜಮೀನನ್ನು ಪ್ರವೇಶಿಸುವ ಹಾಗೂ ಓಡಾಟದ (Easement) ಹಕ್ಕು ಇರುತ್ತದೆ; ಇದಕ್ಕೆ ಅಡ್ಡಿಪಡಿಸಲು ಯಾರಿಗೂ ಅಧಿಕಾರವಿಲ್ಲ.  

ತಹಶೀಲ್ದಾರ್‌ಗಳಿಗೆ ಅಧಿಕಾರ: ಸಿಆರ್‌ಪಿಸಿ (CrPC) ಕಲಂ 147ರ ಅನ್ವಯ, ಭೂಮಿ ಮತ್ತು ನೀರಿನ ಬಳಕೆಯ ಹಕ್ಕಿನಿಂದ ಶಾಂತಿಭಂಗ ಉಂಟಾಗುವ ಸಾಧ್ಯತೆಗಳಿದ್ದಲ್ಲಿ, ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕಾನೂನು ಕ್ರಮ ಜರುಗಿಸುವ ಪೂರ್ಣ ಅಧಿಕಾರ ತಹಶೀಲ್ದಾರ್‌ಗಳಿಗೆ ಇರುತ್ತದೆ.  

ತಕ್ಷಣ ತೆರವುಗೊಳಿಸಲು ಸೂಚನೆ: ಗ್ರಾಮ ನಕಾಶೆಯಲ್ಲಿ ಕಂಡುಬರುವ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳನ್ನು ಯಾರಾದರೂ ಬಂದ್ ಮಾಡಿದ್ದರೆ ಅಥವಾ ಸಾರ್ವಜನಿಕ ಬಳಕೆಗೆ ಅಡ್ಡಿಪಡಿಸುತ್ತಿದ್ದರೆ, ಕೂಡಲೇ ಅವುಗಳನ್ನು ತೆರವುಗೊಳಿಸಿ ರೈತರಿಗೆ ದಾರಿ ಕಲ್ಪಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ.

news_1789870604_0_474.webp

 

news_1789870604_1_599.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?