LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮದ್ದೂರು ನಗರದ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಪ್ರತಿಮೆ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಮದ್ದೂರು ನಗರದ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಭಾನುವಾರ ಹೇಳಿದರು.

ನಗರದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದ ಹಿಂಭಾಗದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

ನಗರದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಇನ್ನೆರಡು ತಿಂಗಳಲ್ಲಿ ಪ್ರಾರಂಭವಾಗಲಿದ್ದು, ಕಾಮಗಾರಿ ಮುಗಿದ ಬಳಿಕ ಕೊಲ್ಲಿ ವೃತ್ತದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ನಿರ್ಮಾಣ ಹಾಗೂ ವೃತ್ತಕ್ಕೆ ಹೆಸರಿಡಲು ಈಗಾಗಲೇ ನಗರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಇತ್ತಿಚೆಗೆ ಸಹಕಾರ ಸಂಘಗಳಲ್ಲಿ ಸಾಕಷ್ಟು ಅವ್ಯವಹಾರಗಳು ನಡೆಯುತ್ತಿರುವುದು ಸಾಮಾನ್ಯವಾಗಿದೆ. ಆದರೆ, ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ಅಂತಹ ಯಾವುದೇ ಲೋಪಗಳು ಕಂಡು ಬಂದಿಲ್ಲ. ಹೀಗಾಗಿ ಸದಸ್ಯರು ಹಾಗೂ ನಿರ್ದೆಶಕರು ಮುನ್ನೆಚ್ಚರಿಕೆ ಕ್ರಮವಾಗಿ ಲೆಕ್ಕ ಪತ್ರಗಳನ್ನು ಆಗಾಗ್ಗೆ ಗಮನಿಸುತಿರಬೇಕೆಂದು ಸಲಹೆ ನೀಡಿದರು.

ತಾಲೂಕಿನಲ್ಲಿ 22 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವೀರಶೈವ ಲಿಂಗಾಯತ ಸಮುದಾಯವಿದೆ. ಅದರಲ್ಲಿ ಆರ್ಥಿಕವಾಗಿ ಹಿಂದುಳಿದ ವಸತಿ ವಂಚಿತರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುವುದು. ಹಾಗೂ ನಗರ ವ್ಯಾಪ್ತಿಯಲ್ಲಿರುವ ಸ್ಮಶಾನವು ಸಾಕಷ್ಟು ಅಧ್ವಾನಗೊಂಡಿದ್ದು, ಇನ್ನು ಮೂರು ತಿಂಗಳಲ್ಲಿ ಸ್ಮಶಾನ ಮತ್ತು ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಇನ್ನು ಜಗಜ್ಯೋತಿ ಬಸವೇಶ್ವರ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಶಾಸಕ ಉದಯ್ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿಗಳಾದ ಶಿವಸಿದ್ಧೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಇದೇ ವೇಳೆ ವೈದ್ಯನಾಥಪುರದ ಜಂಗಮ‌ ಮಠದ ಶ್ರೀ ರೇಣುಕಾ ಶಿವಾಚಾರ್ಯಸ್ವಾಮಿಜಿ, ಮಡೇನಹಳ್ಳಿಯ ತೋಂಟದಾರ್ಯ ಮಠದ ಅರುಣಾಚಲ ಸ್ವಾಮೀಜಿ, ಎಸ್.ಐ.ಹೊನ್ನಲಗೆರೆ ಶಿವ ಕ್ಷೇತ್ರ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಜಗಜ್ಯೋತಿ ಬಸವೇಶ್ವರ ಪತ್ತಿನ ಸಂಘದ ಅಧ್ಯಕ್ಷ ಪಿ‌‌.ರಾಜಶೇಖರ್, ಎಸ್‌.ವ್ಯಾಸ ವಿಶ್ವ ವಿದ್ಯಾಲಯ ಕುಲಾಧಿಪತಿ ಡಾ.ಹೆಚ್.ಆರ್‌.ದಯಾನಂದ್ ಸ್ವಾಮಿ, ಕೆ.ಹೆಚ್.ವೀರಭದ್ರಪ್ಪ, ಉಮಾಪತಿ, ಹೆಚ್.ಆರ್.ನಾಗಭೂಷಣ್ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!