LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜಾಸೇವೆ ಆಂದೋಲನ : ಕೆಲವು ಅರ್ಜಿಗಳಿಗೆ ಸ್ಥಳದಲ್ಲೆ ಪರಿಹಾರ: ಮದ್ದೂರು ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್

ಮಂಡ್ಯ :  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಜಾ ಸೇವೆ ಆಂದೋಲನದಲ್ಲಿ ಸಾರ್ವಜನಿಕರು ನೀಡುವ ದೂರು ಮತ್ತು ಸರ್ಕಾರದ ಸವಲತ್ತುಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತ್ವರಿತವಾಗಿ ಸಮಸ್ಯೆ ಬಗೆಹರಿಸಬೇಕೆಂದು ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ ಸೂಚನೆ ನೀಡಿದರು.

ಮದ್ದೂರು ತಾಲೂಕಿನ ಆತಗೂರು ಗ್ರಾಮದಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರದ ಆದೇಶದಂತೆ ಪ್ರತಿ ತಾಲ್ಲೂಕು, ಹೋಬಳಿ ಸೇರಿದಂತೆ ಎಲ್ಲಾ ಗ್ರಾ.ಪಂ ವ್ಯಾಪ್ತಿಗಳಲ್ಲಿ ಪ್ರತಿ ಶನಿವಾರ ಪ್ರಜಾಸೇವೆ ಆಂದೋಲನ ಕಾರ್ಯಕ್ರಮವನ್ನು ನಡೆಸಲಾಗುವುದು. ಇದು ಜನರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಸರ್ಕಾರದ ಹೊಸ ಯೋಜನೆಯಾಗಿದೆ. ಸಾರ್ವಜನಿಕರು ನೀಡುವ ದೂರುಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತ್ವರಿತವಾಗಿ ಸಮಸ್ಯೆ ಬಗೆಹರಿಸಬೇಕೆಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.

ತಾಪಂ ಇಓ ರಾಮಲಿಂಗಯ್ಯ ಮಾತನಾಡಿ, ರಾಜ್ಯ ಸರ್ಕಾರವು ನೂತನವಾಗಿ ಸ್ಥಾಪಿಸಿರುವ ಪ್ರಜಾಸೇವಾ ಇಲಾಖೆಯ ವತಿಯಿಂದ ಹೋಬಳಿವಾರು ಪ್ರಜಾಸೇವಾ ಅಭಿಯಾನ ಏರ್ಪಡಿಸಿ ಜನಸಾಮಾನ್ಯರಿಂದ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಕೆಲವು ಅರ್ಜಿಗಳಿಗೆ ಪರಿಹಾರ ನೀಡಲಾಗುತ್ತಿದೆ ಹೀಗಾಗಿ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು‌.

ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ನಿಡಘಟ್ಟ ಗ್ರಾ.ಪಂ ಮಾಜಿ ಅಧ್ಯಕ್ಷ ಎನ್.ಆರ್.ಪ್ರಕಾಶ್ ಮಾತನಾಡಿ ಗ್ರಾಮಕ್ಕೆ ಹಿಂದಿನಿಂದಲೂ ಸಾರ್ವಜನಿಕ ಸ್ಮಶಾನ ಇಲ್ಲದೇ ಜನರಿಗೆ ತೊಂದರೆಯಾಗಿದ್ದು ಕೂಡಲೇ ಸಮಸ್ಯೆ ಬಗೆಹರಿಸಬೇಕು ಹಾಗೂ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆಗೊಳಿಸಬೇಕೆಂದು ಎಂದು ಆಗ್ರಹಿಸಿ ತಹಶೀಲ್ದಾರ್ ಶಿವಕುಮಾರ್ ಬಿರಾದಾರ್ ರವರಿಗೆ ಅಹವಾಲು ಸಲ್ಲಿಸಿದರು.

ಇನ್ನು ಕಾರ್ಯಕ್ರಮದಲ್ಲಿ ಕಂದಾಯ, ಗ್ರಾಮೀಣಾಭಿವೃದ್ಧಿ, ಸೆಸ್ಕಾಂ, ಆಹಾರ, ಶಿಶು ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರಿಗೆ ಸೇರಿದಂತೆ ವಿವಿಧ ಇಲಾಖೆಗಳಗಳಿಂದ 190 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

ಕಾರ್ಯಕ್ರಮದಲ್ಲಿ ಬಿಇಓ ಧನಂಜಯ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪರಮೇಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ರವಿಶಂಕರ್, ನೀವು ಇಲಾಖೆ ಸಹಾಯಕ ನಿರ್ದೇಶಕ ಡಾ.ಗೋವಿಂದ್, ಚೆಸ್ಕಾಂ ಇಇ ಶಿವಕುಮಾರ್, ಎಡಿಎಲ್ಆರ್ ಲಿಖಿತ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!