LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿಸಾಕ್ಷಿ ವಿಚಾರಣೆಗೆ ದರ್ಶನ್ ಪರ ವಕೀಲರ ಆಕ್ಷೇಪ, ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪ್ರದೋಷ್‌ಗೆ ಜಡ್ಜ್ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಅವರು, 'ಮಾಫಿಸಾಕ್ಷಿ' (ಅಪ್ರೂವರ್) ಆದೇಶದ ಪ್ರತಿ ತಲುಪಿದೆಯೇ ಎಂದು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಪ್ರದೋಷ, ತನಗೆ ಆದೇಶ ತಲುಪಿದೆ ಹಾಗೂ ವಿಧಿಸಲಾಗಿರುವ ಶರತ್ತುಗಳಿಗೂ ಸಮ್ಮತಿ ಇದೆ ಎಂದು ತಿಳಿಸಿದ್ದಾನೆ. ಇದೇ ವೇಳೆ ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಪ್ರಸನ್ನ ಕುಮಾರ್ ಅವರು ಸೆಪ್ಟೆಂಬರ್ 23ರಂದು ಪ್ರದೋಷ್ ಸಾಕ್ಷಿ ವಿಚಾರಣೆಗೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಕೋರ್ಟ್‌ಗೆ ಮನವಿ ಸಲ್ಲಿಕೆ ಮಾಡಿದರು.

ಆದರೆ, ಮಾಫಿಸಾಕ್ಷಿ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಲಾಗಿರುವುದರಿಂದ ಪ್ರದೋಷ್ ಸಾಕ್ಷಿ ವಿಚಾರಣೆಯನ್ನು ಸದ್ಯಕ್ಕೆ ಮುಂದೂಡಬೇಕೆಂದು ಆರೋಪಿ ನಟ ದರ್ಶನ್ ಪರ ಹಿರಿಯ ವಕೀಲ ಹಶ್ಮದ್ ಪಾಷಾ ನ್ಯಾಯಾಲಯಕ್ಕೆ ಮನವಿ ಮಾಡಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ಪ್ರದೋಷ್‌ಗೆ ಸಮನ್ಸ್ ಜಾರಿ ಮಾಡುವ ವಿಚಾರದ ಕುರಿತು ನಾಳೆ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ, ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಪ್ರಾಸಿಕ್ಯೂಷನ್ ಪರ ಅಭಿಯೋಜಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪ್ರಮುಖ ಹಂತದ ವಿಚಾರಣೆಗಳು ನಡೆಯುತ್ತಿರುವಾಗ ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಲಾಯಿತು. ಎಲ್ಲಾ ಕಡೆಗಳ ವಾದಗಳನ್ನು ಗಮನಿಸಿದ 59ನೇ ಸಿಸಿಎಚ್ ಕೋರ್ಟ್, ಪ್ರಕರಣದ ಮುಂದಿನ ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶಿಸಿತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!