LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷ ಅಧಿವೇಶನದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಕಣ್ಣೀರಿನ ಕಥೆ ಬಿಚ್ಚಿಟ್ಟ ಶಾಸಕ ಗೋಪಾಲಕೃಷ್ಣ ಬೇಳೂರು!

ಬೆಂಗಳೂರು: ಮಲೆನಾಡು ಭಾಗದಲ್ಲಿ ಹಿಂದೆ ಮೈಸೂರು ಮಹಾರಾಜರ ಕಾಲದಲ್ಲಿ ಹಾಗೂ ಕಾಗೋಡು ತಿಮ್ಮಪ್ಪ, ಎಸ್. ಬಂಗಾರಪ್ಪ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ನೀಡಲಾಗಿದ್ದ ಹಕ್ಕುಪತ್ರಗಳನ್ನು ವಜಾ ಮಾಡಲಾಗುತ್ತಿದ್ದು, ರೈತರಿಗೆ ನೋಟಿಸ್ ನೀಡಿ ಒಕ್ಕಲೆಬ್ಬಿಸುವ ಕೆಲಸ ನಡೆಯುತ್ತಿದೆ ಎಂದು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ವಿಧಾನಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ವಿಶೇಷ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅವರು, ಮಲೆನಾಡಿನ ರೈತರ ಹಾಗೂ ಶರಾವತಿ ಸಂತ್ರಸ್ತರ ಸಂಕಷ್ಟಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟು, ಸದನದ ಗಮನಕ್ಕೆ ತಂದರು.

ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಮಾತಿನ ಪ್ರಮುಖ ಅಂಶಗಳು:

ಮಹಾರಾಜರ ಕಾಲದ ಹಕ್ಕುಪತ್ರ ರದ್ದು: ಮಲೆನಾಡಿನಲ್ಲಿ ಹಿಂದೆ ಮಹಾರಾಜರ ಕಾಲದಲ್ಲಿ ನೀಡಲಾಗಿದ್ದ ಹಾಗೂ ಕಾಗೋಡು ತಿಮ್ಮಪ್ಪ, ಬಂಗಾರಪ್ಪ, ಯಡಿಯೂರಪ್ಪ ಅವರ ಕಾಲದಲ್ಲಿ ನೀಡಿದ್ದ ಹಕ್ಕುಪತ್ರಗಳನ್ನು ಸಹ ಇವತ್ತು ವಜಾ ಮಾಡಲಾಗುತ್ತಿದೆ. ರೈತರಿಗೆ ಸತತವಾಗಿ ನೋಟಿಸ್ ನೀಡುವ ಮೂಲಕ ಅವರನ್ನು ಜಮೀನಿನಿಂದ ಒಕ್ಕಲೆಬ್ಬಿಸುವ ಕೆಲಸ ನಡೆಯುತ್ತಿದೆ.

ಶರಾವತಿ ಸಂತ್ರಸ್ತರ ಕಣ್ಣೀರು: ನಾಡಿಗೆ ಬೆಳಕು ನೀಡಲು ಶರಾವತಿ ಡ್ಯಾಂ ನಿರ್ಮಾಣಕ್ಕಾಗಿ ತಮ್ಮ ಆಸ್ತಿ-ಪಾಸ್ತಿ ಹಾಗೂ ಜಮೀನುಗಳನ್ನು ತ್ಯಾಗ ಮಾಡಿದ ಶರಾವತಿ ಮುಳುಗಡೆ ಸಂತ್ರಸ್ತ ರೈತರು ಇಂದಿಗೂ ಸಂಕಷ್ಟದಲ್ಲಿದ್ದಾರೆ. ಸುಮಾರು 9,000 ಹೆಕ್ಟೇರ್ ಭೂಮಿಯ ಹಕ್ಕುಪತ್ರಗಳು ವಜಾಗೊಂಡಿದ್ದು, ಸಂತ್ರಸ್ತ ರೈತರು ಸುಪ್ರೀಂ ಕೋರ್ಟ್ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಮತ್ತು ತನಿಖೆ: ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಧು ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಹಾಗೂ ಅಧಿಕಾರಿಗಳ ಜತೆ ಚರ್ಚಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಕೋರ್ಟ್ ನೀಡಿದ ಆದೇಶದಂತೆ ಡಿಸಿ ನೇತೃತ್ವದಲ್ಲಿ ಜಾಗದ ಸರ್ವೆ ನಡೆಸಿ ವರದಿ ಸಲ್ಲಿಕೆಯಾಗಿದ್ದು, ವಿಚಾರಣೆ ಹಂತದಲ್ಲಿದೆ.

ರೈತರ ಬದುಕು ಅನಿಶ್ಚಿತ: ಸುಪ್ರೀಂ ಕೋರ್ಟ್ ಏನಾದರೂ ರೈತರ ಪರವಾಗಿ ಆದೇಶ ನೀಡಿದರೆ ಮಾತ್ರ ಅವರ ಬದುಕು ಉಳಿಯುತ್ತದೆ. ಇಲ್ಲವಾದರೆ ಸಾವಿರಾರು ರೈತರ ಕುಟುಂಬಗಳು ಬೀದಿಗೆ ಬಿದ್ದು, ವಿಷ ಕುಡಿಯುವಂತಹ ಭೀಕರ ಪರಿಸ್ಥಿತಿ ಎದುರಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕಸ್ತೂರಿ ರಂಗನ್ ವರದಿ ಮತ್ತು ಗ್ರಾಮ ಸಭೆ: ಕೇರಳ ಸೇರಿದಂತೆ ನೆರೆ ರಾಜ್ಯಗಳು ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆ ವಹಿಸಿ ತಮ್ಮ ಹಕ್ಕುಗಳನ್ನು ಪಡೆದುಕೊಂಡಿವೆ. ಆದರೆ ನಮ್ಮಲ್ಲಿ ವರದಿ ಜಾರಿಯಾದ ಮೇಲೆ ಗ್ರಾಮ ಸಭೆಗಳನ್ನು ಕರೆದು ಸಾರ್ವಜನಿಕರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ಮಲೆನಾಡು ಭಾಗದ ರೈತರ ಹಾಗೂ ಮುಳುಗಡೆ ಸಂತ್ರಸ್ತರ ಭೂಮಿ ಹಕ್ಕನ್ನು ರಕ್ಷಿಸಲು ಸರ್ಕಾರ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸದನವನ್ನು ಒತ್ತಾಯಿಸಿದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!