LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೋಳದ ರಾಶಿ ಕಾಯುತ್ತಿದ್ದವರಿಗೆ ಬಡಿದ ಸಿಡಿಲು; ಓರ್ವ ರೈತ ದುರ್ಮರಣ, ಮತ್ತೋರ್ವನಿಗೆ ಗಂಭೀರ ಗಾಯ

ಬೆಳಗಾವಿ : ಜಮೀನಿನಲ್ಲಿ ಬೆಳೆದಿದ್ದ ಗೋವಿನಜೋಳದ ರಾಶಿಯನ್ನು ಕಾಯಲು ತೆರಳಿದ್ದ ಇಬ್ಬರು ರೈತರ ಮೇಲೆ ಸಿಡಿಲು ಬಡಿದ ಪರಿಣಾಮ ಓರ್ವ ರೈತ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿರುವ ಶೋಚನೀಯ ಘಟನೆ ಯರಗಟ್ಟಿ ತಾಲೂಕಿನ ಶ್ರೀರಂಗಪುರ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದೆ.

ಮದ್ಲೂರ ಗ್ರಾಮದ ನಿವಾಸಿ ಕೇದಾರಪ್ಪ ಮಲ್ಲಪ್ಪ ಗುರ್ಲಹೊಸೂರ (47) ಸಿಡಿಲಾಘಾತದಿಂದ ಅಸುನೀಗಿದ ದುರ್ದೈವಿ. ಘಟನೆಯಲ್ಲಿ ಇವರ ಸಂಬಂಧಿ ಭೀಮಪ್ಪ ಕೇದಾರಪ್ಪ ಗುರ್ಲಹೊಸೂರ (45) ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಶಿ ಕಾವಲಿದ್ದಾಗ ನಡೆದ ದುರಂತ:

ಕೇದಾರಪ್ಪ ಹಾಗೂ ಭೀಮಪ್ಪ ತಮ್ಮ ಜಮೀನಿನಲ್ಲಿ ಗೋವಿನಜೋಳದ ರಾಶಿ ಮಾಡಿದ್ದರಿಂದ ರಾತ್ರಿ ಕಾವಲಿಗೆ ತೆರಳಿದ್ದರು. ಮಧ್ಯರಾತ್ರಿ ಏಕಾಏಕಿ ಗುಡುಗು-ಸಿಡಿಲು ಸಹಿತ ಭಾರಿ ಮಳೆ ಆರಂಬಗೊಂಡಿದೆ. ಈ ವೇಳೆ ಇಬ್ಬರೂ ರಾಶಿ ಕಾಯುತ್ತಿದ್ದ ಸ್ಥಳಕ್ಕೇ ಸಿಡಿಲು ಬಡಿದಿದ್ದು, ಕೇದಾರಪ್ಪ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ತೀವ್ರವಾಗಿ ಗಾಯಗೊಂಡ ಭೀಮಪ್ಪ ಅವರನ್ನು ತಕ್ಷಣವೇ ಧಾರವಾಡದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ ಎಂದು ಯರಗಟ್ಟಿ ಪಿಎಸ್‌ಐ ಎಲ್. ಬಿ. ಮಾಳಿ ತಿಳಿಸಿದ್ದಾರೆ.

ಸ್ಥಳಕ್ಕೆ ಅಧಿಕಾರಿಗಳ ಭೇಟಿ – ಪರಿಹಾರದ ಭರವಸೆ:

ಘಟನೆ ತಿಳಿಯುತ್ತಿದ್ದಂತೆ ಯರಗಟ್ಟಿ ತಹಶೀಲ್ದಾರ್ ಎಂ. ವಿ. ಗುಂಡಪ್ಪಗೋಳ, ಪಿಎಸ್‌ಐ ಎಲ್. ಬಿ. ಮಾಳಿ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಕೇದಾರಪ್ಪ ಅವರು ಪೋಷಕರು, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದ ತಹಶೀಲ್ದಾರ್, ಸರ್ಕಾರದ ನಿಯಮಾವಳಿ ಪ್ರಕಾರ ಶೀಘ್ರವೇ ಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ರೈತರನ್ನು ಚಿಂತೆಗೀಡು ಮಾಡಿದ ಮಳೆ:

ಜಿಲ್ಲೆಯ ವಿವಿಧ ಭಾಗಗಳಾದ ಗೋಕಾಕ, ಸವದತ್ತಿ, ಹುಕ್ಕೇರಿ ಹಾಗೂ ನೇಸರಗಿ ಸುತ್ತಮುತ್ತ ಭಾನುವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ದೀರ್ಘಕಾಲದ ಒಣ ಹವೆಯಿಂದ ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಟ್ಟಿದ್ದ ರೈತರಿಗೆ, ಈಗ ಕೊಯ್ಲು ಹಾಗೂ ರಾಶಿ ಮಾಡುವ ಕೊನೆಯ ಹಂತದಲ್ಲೇ ಮಳೆ ಸುರಿದಿರುವುದು ತೀವ್ರ ಆತಂಕ ಹಾಗೂ ನಷ್ಟದ ಭೀತಿಯನ್ನು ತಂದೊಡ್ಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?