LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ‌ ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್!

ನವದೆಹಲಿ/ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳು ಸೇರಿದಂತೆ ಒಟ್ಟು ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ECI) ಪ್ರಕಟಿಸಿದೆ.

ಹಾಲಿ ನಾಲ್ವರು ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿಯು 2026ರ ನವೆಂಬರ್ 11ರಂದು ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ನೂತನ ಸದಸ್ಯರ ಆಯ್ಕೆಗೆ ದಿನಾಂಕ ನಿಗದಿಪಡಿಸಲಾಗಿದೆ.

​ನಿವೃತ್ತಿ ಹೊಂದಲಿರುವ ಹಾಲಿ ಸದಸ್ಯರು ಮತ್ತು ಕ್ಷೇತ್ರಗಳು:

  • ​ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ (Karnataka South-East Graduates'): ಚಿದಾನಂದ್ ಎಂ. ಗೌಡ
  • ​ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರ (Karnataka West Graduates'): ಎಸ್.ವಿ. ಸಂಕನೂರ
  • ​ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ (Karnataka North-East Teachers'): ಶಶೀಲ್ ಜಿ. ನಮೋಶಿ
  • ​ಬೆಂಗಳೂರು ಶಿಕ್ಷಕರ ಕ್ಷೇತ್ರ (Bangalore Teachers'): ಪುಟ್ಟಣ್ಣ

​ಚುನಾವಣಾ ವೇಳಾಪಟ್ಟಿ ವಿವರ:

  • ​ಅಧಿಸೂಚನೆ ಪ್ರಕಟಣೆ: ಸೆಪ್ಟೆಂಬರ್ 29, 2026 (ಮಂಗಳವಾರ)
  • ​ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 06, 2026 (ಮಂಗಳವಾರ)
  • ​ನಾಮಪತ್ರಗಳ ಪರಿಶೀಲನೆ: ಅಕ್ಟೋಬರ್ 07, 2026 (ಬುಧವಾರ)
  • ​ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನಾಂಕ: ಅಕ್ಟೋಬರ್ 09, 2026 (ಶುಕ್ರವಾರ)
  • ​ಮತದಾನದ ದಿನಾಂಕ: ಅಕ್ಟೋಬರ್ 23, 2026 (ಶುಕ್ರವಾರ)
  • ​ಮತದಾನದ ಸಮಯ: ಬೆಳಗ್ಗೆ 08:00 ರಿಂದ ಸಂಜೆ 04:00 ರವರೆಗೆ
  • ​ಮತಗಳ ಎಣಿಕೆ ಹಾಗೂ ಫಲಿತಾಂಶ: ಅಕ್ಟೋಬರ್ 27, 2026 (ಮಂಗಳವಾರ)
  • ​ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ದಿನಾಂಕ: ಅಕ್ಟೋಬರ್ 31, 2026 (ಶನಿವಾರ)

​ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ:

​ಚುನಾವಣೆ ಘೋಷಣೆಯಾಗಿರುವ ಕರ್ನಾಟಕದ ಆಯಾ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಯು (Model Code of Conduct) ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

news_1790059800_0_574.webp

 

news_1790059800_1_221.webp

 

news_1790059800_2_772.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?