LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಜ್ಯೋತಿ ಬಳಿಕ ಗೃಹಲಕ್ಷ್ಮಿ ಮರುಪರಿಶೀಲನಾ ಸಮೀಕ್ಷೆಗೆ ತಯಾರಿ; ಶೀಘ್ರದಲ್ಲೇ ಮನೆ ಮನೆಗೆ ಗಣತಿದಾರರು

ಯಾದಗಿರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಯ ಫಲಾನುಭವಿಗಳ ದಾಖಲಾತಿ ಪರಿಶೀಲನಾ ಸಮೀಕ್ಷೆಯು ಮುಕ್ತಾಯದ ಹಂತ ತಲುಪಿದೆ. ಸೆಪ್ಟೆಂಬರ್ ಅಂತ್ಯಕ್ಕೆ ಗೃಹಜ್ಯೋತಿ ಸಮೀಕ್ಷೆಯ ವಿಸ್ತರಿಸಲಾದ ಗಡುವು ಕೊನೆಗೊಳ್ಳಲಿದ್ದು, ಇದರ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಮುಖ ಗ್ಯಾರಂಟಿಯಾದ 'ಗೃಹಲಕ್ಷ್ಮಿ' ಯೋಜನೆಯ ಮರುಪರಿಶೀಲನಾ ಸಮೀಕ್ಷೆಗೆ ಸರ್ಕಾರ ಹಾಗೂ ಜಿಲ್ಲಾಡಳಿತ ಸಮರಾದಿ ಸಿದ್ಧತೆಗಳನ್ನು ನಡೆಸುತ್ತಿವೆ.

ಮೃತಪಟ್ಟವರ ಖಾತೆಗೂ ತಲುಪುತ್ತಿದೆ ಹಣ: ಯೋಜನೆಯಡಿ ನೋಂದಾಯಿತರಾಗಿದ್ದ ಸಾವಿರಾರು ಫಲಾನುಭವಿಗಳು ವಯೋಸಹಜ ಕಾಯಿಲೆ, ಅನಾರೋಗ್ಯ ಹಾಗೂ ರಸ್ತೆ ಅಪಘಾತ ಮುಂತಾದ ಕಾರಣಗಳಿಂದ ಮೃತಪಟ್ಟಿದ್ದಾರೆ. ಆದರೂ ಅವರ ಖಾತೆಗಳಿಗೆ ಸತತವಾಗಿ ಮಾಸಿಕ ಕಂತಿನ ಹಣ ಪಾವತಿಯಾಗುತ್ತಿರುವುದು ಬೆಳಕಿಗೆ ಬಂದಿದೆ. ಇದರೊಂದಿಗೆ, ಫಲಾನುಭವಿ (ಮನೆಯ ಯಜಮಾನಿ) ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೂ ಸಹ ಯೋಜನೆಯ ಲಾಭ ಪಡೆಯುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅನರ್ಹರನ್ನು ಯೋಜನೆಯಿಂದ ಕೈಬಿಟ್ಟು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಈ ಬೃಹತ್ ಮರುಪರಿಶೀಲನಾ ಸಮೀಕ್ಷೆಯ ಅಗತ್ಯತೆ ಎದುರಾಗಿದೆ.

ಮೊಬೈಲ್ ಆ್ಯಪ್ ಮೂಲಕ ಮುಖಚಹರೆ, ಬಯೋಮೆಟ್ರಿಕ್ ದೃಢೀಕರಣ: ಈ ವಿಶೇಷ ಸಮೀಕ್ಷೆಗಾಗಿ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (EDCS) ನಿರ್ದೇಶನಾಲಯವು ವಿಶೇಷ ಮೊಬೈಲ್‌ ಆ್ಯಪ್‌ ಒಂದನ್ನು ಅಭಿವೃದ್ಧಿಪಡಿಸುತ್ತಿದೆ. ಗಣತಿದಾರರು ಪ್ರತಿಯೊಬ್ಬ ಫಲಾನುಭವಿಯ ಮನೆ-ಮನೆಗೆ ತೆರಳಿ ಸರ್ಕಾರ ಸೂಚಿಸಿದ ದಾಖಲೆಗಳನ್ನು ಸ್ಥಳದಲ್ಲೇ ಪರಿಶೀಲಿಸಲಿದ್ದಾರೆ. ಜೊತೆಗೆ, ಮೊಬೈಲ್ ಆ್ಯಪ್ ಸಹಾಯದಿಂದ ಫಲಾನುಭವಿಗಳ ಬಯೊಮೆಟ್ರಿಕ್ ಹಾಗೂ ಮುಖಚಹರೆ ದೃಢೀಕರಣ (Face Recognition) ಪ್ರಕ್ರಿಯೆಯನ್ನು ಫೋಟೊ ಸಹಿತ ಪೂರ್ಣಗೊಳಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

1,500 ಗಣತಿದಾರರ ನಿಯೋಜನೆ: ಯಾದಗಿರಿ ಜಿಲ್ಲೆಯೊಂದರಲ್ಲೇ ಒಟ್ಟು 2,51,806 ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿದ್ದಾರೆ. ಸಮೀಕ್ಷಾ ಕಾರ್ಯ ಸುಸೂತ್ರವಾಗಿ ನಡೆಯಲು ಪ್ರತಿಯೊಬ್ಬ ಗಣತಿದಾರರಿಗೆ ಕನಿಷ್ಠ 250 ಮನೆಗಳ ಗುರಿ ನಿಗದಿಪಡಿಸಲಾಗಿದೆ. ಶೇಕಡಾ 10ರಷ್ಟು ಹೆಚ್ಚುವರಿ ಸಿಬ್ಬಂದಿ ಸೇರಿದಂತೆ ಒಟ್ಟು 1,500 ಗಣತಿದಾರರನ್ನು ನಿಯೋಜಿಸಲಾಗುತ್ತಿದೆ. ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದಂತೆ ನಗರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಹಾಗೂ ಗ್ರಾಮೀಣ ಭಾಗದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಪೂರ್ಣ ಅಧಿಕಾರ ನೀಡಲಾಗಿದೆ.

ವಲಸೆ ಮತ್ತು ಗಣತಿದಾರರ ಕೊರತೆ - ಜಿಲ್ಲಾಡಳಿತಕ್ಕೆ ಹೊಸ ಸವಾಲು: ಜಿಲ್ಲೆಯ 2.51 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ತೆರಳಿ ಸಮೀಕ್ಷೆ ನಡೆಸುವುದು ದೊಡ್ಡ ಪ್ರಮಾಣದ ಮಾನವಸಂಪನ್ಮೂಲ ಹಾಗೂ ಹೆಚ್ಚಿನ ಸಮಯವನ್ನು ಬೇಡುತ್ತದೆ. ಪ್ರಸ್ತುತ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಗಣತಿದಾರರ ಅಭಾವ ಕಂಡುಬರುತ್ತಿದೆ. ಜೊತೆಗೆ ಯಾದಗಿರಿ ಜಿಲ್ಲೆಯಲ್ಲಿ ಉದ್ಯೋಗಕ್ಕಾಗಿ ಗುಳೆ ಹೋಗುವ (ವಲಸೆ) ಪ್ರವೃತ್ತಿ ಹೆಚ್ಚಿರುವುದು ಮತ್ತು ನಗರ ಪ್ರದೇಶಗಳಲ್ಲಿ ಫಲಾನುಭವಿಗಳ ನಿವಾಸ ಹಾಗೂ ನ್ಯಾಯಬೆಲೆ ಅಂಗಡಿಗಳ ಸ್ಥಳ ಬೇರೆ ಬೇರೆಯಾಗಿರುವುದು ಸಮೀಕ್ಷೆಗೆ ಸವಾಲಾಗಿದೆ. ಹೀಗಾಗಿ ನಿಗದಿತ ಸಮಯದಲ್ಲಿ ಎಲ್ಲರನ್ನೂ ತಲುಪಲು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರನ್ನೂ ಈ ಸಮೀಕ್ಷಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!