LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಠ್ಯ ಪುಸ್ತಕದ ಜೊತೆಗೆ ಕ್ರೀಡೆಗಳಲ್ಲೂ ಸಕ್ರಿಯವಾಗಿ: ಮನ್ ಮುಲ್ ಅಧ್ಯಕ್ಷ ಎಂ.ಕೆ.ಹರೀಶ್ ಬಾಬು

ಮಂಡ್ಯ : ಮಕ್ಕಳು ಶಾಲಾ ಹಂತದಲ್ಲೇ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು. ಆಗ ಮಾತ್ರವೇ ಕ್ರೀಡಾಪಟುಗಳು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಮನ್ ಮುಲ್ ಅಧ್ಯಕ್ಷ ಎಂ.ಕೆ.ಹರೀಶ್ ಬಾಬು ಸೋಮವಾರ ಕಿವಿಮಾತು ಹೇಳಿದರು.

ಮದ್ದೂರು ತಾಲೂಕಿನ ಕೆ.ಬೆಳ್ಳೂರು ಗ್ರಾಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಯೋಗದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕದ ಶಿಕ್ಷಣಕ್ಕೆ ಸೀಮಿತವಾಗದೆ ಕ್ರೀಡೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ನಮಗೆ ಕಲಿಸಿಕೊಡುತ್ತದೆ. ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ವಿಕಸನಕ್ಕೆ ಕ್ರೀಡೆಗಳು ಪೂರಕವಾಗಿದ್ದು, ಗ್ರಾಮೀಣ ಭಾಗದ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿದರೆ ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದರು.

ಈಗಾಗಲೇ ಶಾಸಕ ಕೆ.ಎಂ.ಉದಯ್ ಅವರು ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಸರ್ಕಾರಿ ಶಾಲೆಗಳ ಮಕ್ಕಳಿಗೆ ಬ್ಯಾಗ್, ಪುಸ್ತಕ, ಪರಿಕರಗಳು ಸೇರಿದಂತೆ ಶಾಲಾ ಶುಲ್ಕವನ್ನು ಭರಿಸುವ ಜೊತೆಗೆ ವಸತಿ ಶಾಲೆಗಳು, ಶಾಲಾ ಕಾಲೇಜುಗಳ ಕಟ್ಟಡ ಸೇರಿದಂತೆ ಶೈಕ್ಷಣಿಕ ಕ್ಷೇತ್ರಕ್ಕೆ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ.ಧನಂಜಯ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಕ್ಷಮತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳು ಕ್ರೀಡೆ ಹಾಗೂ ಶಿಕ್ಷಣ ಎರಡರಲ್ಲೂ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ತಾಲ್ಲೂಕಿನ ವಿವಿಧ ಗ್ರಾಮೀಣ ಹಾಗೂ ನಗರ ಪ್ರದೇಶಗಳ ನೂರಾರು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಥ್ಲೆಟಿಕ್ಸ್, ಕಬಡ್ಡಿ, ಕೊಕ್ಕೊ, ವಾಲಿಬಾಲ್, ಥ್ರೋಬಾಲ್ ಸೇರಿದಂತೆ ವಿವಿಧ ದೈಹಿಕ ಹಾಗೂ ಸಾಂಪ್ರದಾಯಿಕ ಪಂದ್ಯಾವಳಿಗಳು ನಡೆದವು.

ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೆಶಕಿ ರಾಜೇಶ್ವರಿ, ಕ್ಷೇತ್ರ ಸಮನ್ವಯಾಧಿಕಾರಿ ನಾಗೇಶ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅನಂತೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಹೇಮಾವತಿ, ದೈಹಿಕ ಶಿಕ್ಷಣ ಪರಿವೀಕ್ಷಕ ಲೋಕೇಶ್, ಮೋಹನ್, ಪ್ರದೀಪ್ ಎಸ್ಡಿಎಂಸಿ ಅಧ್ಯಕ್ಷ ನಾರಾಯಣ್, ಕುಮಾರ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಕುಮಾರ್ ಸೇರಿದಂತೆ ವಿವಿಧ ಶಾಲೆಗಳ ದೈಹಿಕ ಶಿಕ್ಷಕರು ಸೇರಿದಂತೆ ಮತ್ತಿತರರು.

ವರದಿ : ಗಿರೀಶ್ ರಾಜ್, ಮಂಡ್ಯ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!