LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಫಿಕ್ಸ್: ಸುಳಿವು ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.8ರಿಂದ ರೂ.10ರಷ್ಟು ಹೆಚ್ಚಿಸಲು ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.

ವಿಧಾನಸೌಧದಲ್ಲಿ ಶಿವಕುಮಾರ್ ಅವರನ್ನು ಹಾಲು ಒಕ್ಕೂಟಗಳ ನಿಯೋಗವು ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿತು. 

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು, "ಕಳೆದ 10 ವರ್ಷಗಳಲ್ಲಿ ಪಶು ಆಹಾರ ದರದಲ್ಲಿನ ಹೆಚ್ಚಳ, ಪ್ರತಿ ಲೀಟರ್ ಹಾಲು ಉತ್ಪಾದನೆಗೆ ತಗಲುವ ವೆಚ್ಚ, ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದ ಹಾಲು, ಒಕ್ಕೂಟ ಹೊರತುಪಡಿಸಿ ಬೇರೆ ಕಡೆ ಮಾರಾಟವಾಗುತ್ತಿದೆ? ಒಕ್ಕೂಟ ಎಷ್ಟು ಖರೀದಿಸುತ್ತಿದೆ? ನೆರೆಯ ರಾಜ್ಯಗಳಲ್ಲಿ ಹಾಲು ಖರೀದಿ ಮತ್ತು ಮಾರಾಟ ದರದ ವಿವರ ಸೇರಿದಂತೆ ಸಮಗ್ರ ಮಾಹಿತಿಯನ್ನು ಸಲ್ಲಿಸಿ" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಯೋಗದ ಪರವಾಗಿ ಮಾತನಾಡಿದ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್, "ಹೈನುಗಾರಿಕೆಗೆ ಅಗತ್ಯವಿರುವ ಪಶು ಆಹಾರ, ಮೇವು, ಔಷಧೋಪಚಾರ ಸೇರಿದಂತೆ ನಿರ್ವಹಣಾ ವೆಚ್ಚ ನಿರಂತರವಾಗಿ ಹೆಚ್ಚಾಗುತ್ತಿರುವುದರಿಂದ ಹಾಲಿನ ಉತ್ಪಾದನಾ ವೆಚ್ಚ ಗಣನೀಯವಾಗಿ ಹೆಚ್ಚಾಗಿದೆ. ಸದ್ಯದ ಬರ ಪರಿಸ್ಥಿತಿಯಲ್ಲಿ ಬೆಳೆ ಕೊರತೆಯಿಂದ ವ್ಯವಸಾಯ ಆದಾಯ ತೀವ್ರವಾಗಿ ಕುಸಿದಿದ್ದು, ಮೇವಿನ ಲಭ್ಯತೆ ಕಡಿಮೆಯಾಗಿರುವುದರಿಂದ ಹೈನುಗಾರರು ಸಂಕಷ್ಟ ಎದುರಿಸುತ್ತಿದ್ದಾರೆ" ಎಂದು ವಿವರಿಸಿದರು.

"ವಿವಿಧ ರಾಜ್ಯಗಳ ಸಹಕಾರಿ ಸಂಸ್ಥೆಗಳು ಹಾಗೂ ಖಾಸಗಿ ಡೇರಿಗಳು ನಿರಂತರವಾಗಿ ಹಾಲು ಮತ್ತು ಹಾಲಿನ ಉತ್ಪನ್ನ ದರಗಳನ್ನು ಏರಿಕೆ ಮಾಡುತ್ತಿವೆ. ಗ್ರಾಹಕರ ಹಿತದೃಷ್ಠಿಯಿಂದ ಕಳೆದ ಒಂದೂವರೆ ವರ್ಷಗಳಿಂದ ಹಾಲಿನ ದರವನ್ನು ನಾವು ಹೆಚ್ಚಳ ಮಾಡಿರುವುದಿಲ್ಲ. ಖಾಸಗಿ ಸಂಸ್ಥೆಗಳು ಹೆಚ್ಚಿನ ಹಾಲಿನ ಶೇಖರಣೆಗೆ ಪ್ರಯತ್ನಿಸುತ್ತಿದ್ದು, ಒಕ್ಕೂಟಗಳು ಹಾಲು ಶೇಖರಣೆಗೆ ತೀವ್ರ ಪೈಪೋಟಿ ಎದುರಿಸಬೇಕಾಗಿದೆ" ಎಂದು ಹೇಳಿದರು.

"ಕರ್ನಾಟಕದಲ್ಲಿ ಒಕ್ಕೂಟ ಉತ್ಪಾದಕರಿಂದ ಟೋನ್ಡ್ ಹಾಲನ್ನು ಲೀಟರಿಗೆ ರೂ.35ಕ್ಕೆ ಖರೀದಿಸುತ್ತಿದ್ದು, ನೆರೆಯ ಆಂಧ್ರಪ್ರದೇಶದಲ್ಲಿ ರೂ. 41.5,  ಕೇರಳದಲ್ಲಿ ರೂ. 41.8, ಮಹಾರಾಷ್ಟ್ರದಲ್ಲಿ ರೂ. 41, ತಮಿಳುನಾಡಿನಲ್ಲಿ ರೂ. 42.24 ಕ್ಕೆ ಖರೀದಿಸಲಾಗುತ್ತಿದೆ" ಎಂದು ಹೇಳಿದರು.

"ಇದೇ ರೀತಿ ಹಾಲಿನ ಗರಿಷ್ಠ ಮಾರಾಟ ದರದಲ್ಲಿ ಸಹ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಲೀಟರಿಗೆ ಕನಿಷ್ಠ ರೂ.12 ರಷ್ಟು ಕಡಿಮೆಯಿದೆ" ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!