LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರು, ಹಿರಿಯ ಪತ್ರಕರ್ತರು ಹಾಗೂ ರಂಗಕರ್ಮಿ ಶಿವಾನಂದ ತಗಡೂರು ಅವರಿಗೆ ರಾಜ್ಯ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಅವರು ಪ್ರದಾನ ಮಾಡಿದರು.

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಉಮಾಶ್ರೀ, “ರಂಗಭೂಮಿ ಯಾವ ಕಾಲಕ್ಕೂ ತನ್ನ ಜೀವಂತಿಕೆಯನ್ನು ಕಳೆದುಕೊಳ್ಳುವುದಿಲ್ಲ. ನಾನೂ ಕೂಡ ರಂಗಭೂಮಿ ಕಲಾವಿದೆಯಾಗಿ ಬೆಳೆದು ಈ ಎತ್ತರದ ಸ್ಥಾನಕ್ಕೆ ಬಂದಿದ್ದೇನೆ. ರಂಗಭೂಮಿಯ ಮೂಲಕ ಬೆಳೆದು ಬಂದಿರುವ ಎಲ್ಲ ಕಲಾವಿದರಿಗೂ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆಗಳು” ಎಂದು ಹೇಳಿದರು.

ಸಮಾರಂಭದಲ್ಲಿ ಹಿರಿಯ ನಟ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು, ನಾಟಕ ಅಕಾಡೆಮಿ ಅಧ್ಯಕ್ಷ ಡಾ. ಕೆ.ವಿ. ನಾಗರಾಜಮೂರ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮುಕುಂದರಾಜ್, ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ವಸುಂಧರಾ ಹಾಗೂ ರಿಜಿಸ್ಟ್ರಾರ್ ನೀಲಮ್ಮ, ಶೇಖ್ ಮಾಸ್ತರ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ರಾಜ್ಯ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳು ಹಾಗೂ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!