LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದ ಬರ ನಿರ್ವಹಣೆ ಕೈಪಿಡಿಯೇ ಅವೈಜ್ಞಾನಿಕ: ಸಚಿವ ಈಶ್ವರ ಖಂಡ್ರೆ ಕಿಡಿ

ವಿಧಾನಪರಿಷತ್ತು : ಬರಪೀಡಿತ ತಾಲೂಕು ಘೋಷಣೆಗೆ ಕೇಂದ್ರ ಸರ್ಕಾರ 2020ರಲ್ಲಿ ರೂಪಿಸಿರುವ ಕೈಪಿಡಿಯ ಅಂಶಗಳು ಮತ್ತು ಷರತ್ತುಗಳು ಅವೈಜ್ಞಾನಿಕವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿನಲ್ಲಿಂದು ಪ್ರತಿಪಾದಿಸಿದ್ದಾರೆ.

ಬರ ಕುರಿತ ಚರ್ಚೆಯ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ಯಾವುದೇ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು 3 ವಾರಗಳ ಕಾಲ ಶುಷ್ಕ ವಾತಾವರಣ ಇರಬೇಕು, ಮಳೆ ಆಗಿರಬಾರದು, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಬಿತ್ತನೆ ಆಗಿರಬಾರದು ಎಂಬೆಲ್ಲಾ ಷರತ್ತುಗಳಿವೆ ಎಂದರು.

ಉಪಗ್ರಹ ಆಧಾರಿತವಾಗಿ ಸಂಗ್ರಹಿಸುವ ಈ ಅಂಶಗಳ ಆಧಾರದ ಮೇಲೆ ರಾಜ್ಯ ಮತ್ತು ಕೇಂದ್ರದ ಪ್ರಕೃತಿ ವಿಕೋಪ ನಿರ್ವಹಣಾ ವಿಭಾಗದ ತಾಂತ್ರಿಕ ತಂಡ  ವರದಿ ಪರಿಶೀಲಿಸುತ್ತದೆ. ಜೊತೆಗೆ ದೂರಸಂವೇದಿ ತಂತ್ರಜ್ಞಾನವನ್ನೂ ಬಳಕೆ ಮಾಡುತ್ತದೆ. ಮಣ್ಣಿನ ತೇವಾಂಶದ ಪರಾಮರ್ಶೆ ಮಾಡುತ್ತದೆ. ಬೀಜ ಮೊಳಕೆ ಒಡೆದಿದೆಯೋ ಇಲ್ಲವೋ ಎಂಬ ಪರಾಮರ್ಶೆಯೂ ಆಗುತ್ತದೆ ಎಂದರು.

ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ 12 ಪತ್ರಗಳನ್ನು ಕೇಂದ್ರ ಸರ್ಕಾರಕ್ಕೆ ಬರೆದಿದ್ದರು, ಈಗಲೂ ಕೇಂದ್ರ ಕೃಷಿ ಸಚಿವರಿಗೆ ಈ ನಿಯಮಗಳನ್ನು ಸರಳೀಕರಣ ಮಾಡುವಂತೆ ಪತ್ರ ಬರೆದು ಮನವಿ ಮಾಡಲಾಗಿದೆ. ಕೇಂದ್ರದ ಈ ಕೈಪಿಡಿಯ ನಿಯಮಗಳಿಂದ ಕರ್ನಾಟಕ ರಾಜ್ಯ ಮಾತ್ರವಲ್ಲ ದೇಶಾದ್ಯಂತ ಎಲ್ಲ ರಾಜ್ಯದಲ್ಲೂ, ಬಿಜೆಪಿ ಆಡಳಿತ ರಾಜ್ಯದಲ್ಲೂ ಸಮಸ್ಯೆ ಆಗಿದೆ ಎಂದು ಹೇಳಿದರು.

ಪ್ರಸ್ತುತ ಕೇಂದ್ರ ಸರ್ಕಾರದ ಅಂಗಳದಲ್ಲಿ ಚೆಂಡಿದೆ. ತಾಂತ್ರಿಕ ಮಾಹಿತಿ ಆಧಾರದಲ್ಲಿ ಬರ ಘೋಷಣೆ ಆಗುತ್ತದೆ. ಯಾರೂ ಶಿಫಾರಸು ಮಾಡಿ ಬರ ಘೋಷಿಸಲು ಸಾಧ್ಯವಿಲ್ಲ ಎಂದರು. ಹಿಂದೆ 2023-24ರಲ್ಲಿ ಮಾನದಂಡಗಳ ಆಧಾರದಲ್ಲೇ ಬರ ಘೋಷಣೆ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದರೂ ಕೇಂದ್ರ ಸರ್ಕಾರ 3400 ಕೋಟಿ ರೂ. ಬಿಡುಗಡೆ ಮಾಡಲಿಲ್ಲ. ಆಗ ಸರ್ವೋನ್ನತ ನ್ಯಾಯಾಲಯಕ್ಕೆ ಹೋಗಬೇಕಾಯಿತು. ನ್ಯಾಯಾಲಯದ ಸೂಚನೆಯಂತೆ ಹಣವನ್ನು ಕೇಂದ್ರ ಬಿಡುಗಡೆ ಮಾಡಿತು.

ಬರ ತಾಲೂಕು ಘೋಷಣೆ ವಿಚಾರದಲ್ಲಿ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಇದು ಅಪಪ್ರಚಾರ. ಇದನ್ನು ಅರ್ಥ ಮಾಡಿಕೊಂಡು ಪ್ರತಿಪಕ್ಷಗಳು ಇಂತಹ ಪ್ರಯತ್ನ ಕೈಬಿಡಬೇಕು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದು, ಕೈಪಿಡಿಯಲ್ಲಿನ ಷರತ್ತುಗಳನ್ನು ಬದಲಾವಣೆ ಮಾಡಿಸಲು ಪ್ರಯತ್ನ ಮಾಡಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!