LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಚಾಕುವಿನಿಂದ ಇರಿದು, ಕೊಡಲಿಯಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ

ಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು, ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ.

ಘಟನೆಯ ವಿವರ:

ಇರ್ಫಾನ್ ತಹಶೀಲ್ದಾರ್ ಹತ್ಯೆಗೀಡಾದ ದುರ್ದೈವಿ ಯುವಕ. ದುಷ್ಕರ್ಮಿಗಳು ಆತನ ಮೇಲೆ ಚಾಕು ಹಾಗೂ ಕೊಡಲಿಯಿಂದ ಭೀಕರವಾಗಿ ಹಲ್ಲೆ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಒದ್ದಾಡಿ ಇರ್ಫಾನ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಆಡೂರು ಕುಟುಂಬಸ್ಥರೇ ಈ ಹತ್ಯೆ ಮಾಡಿದ್ದಾರೆ ಎಂದು ಮೃತನ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.

ಹಳೇ ವೈಷಮ್ಯವೇ ಕೊಲೆಗೆ ಕಾರಣ?:

ಮೃತ ಇರ್ಫಾನ್ ತಹಶೀಲ್ದಾರ್ ಹಾಗೂ ಆಡೂರು ಕುಟುಂಬಸ್ಥರ ನಡುವೆ ಕಳೆದ ಕೆಲ ಸಮಯದಿಂದ ಹಳೇ ವೈಷಮ್ಯವಿತ್ತು. ಈ ಹಿಂದೆ ಕೂಡ ಎರಡು ಕುಟುಂಬಗಳ ನಡುವೆ ಹಲವು ಬಾರಿ ಗಲಾಟೆ ಹಾಗೂ ಹೊಡೆದಾಟಗಳು ನಡೆದಿದ್ದವು ಎಂದು ತಿಳಿದುಬಂದಿದೆ. ಇದೇ ದ್ವೇಷ ಮನಸ್ಸಿನಲ್ಲಿಟ್ಟುಕೊಂಡು ಈ ಬರ್ಬರ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗಿದೆ.

ಕುಟುಂಬಸ್ಥರ ಆಕ್ರಂದನ, ಪೋಲಿಸ್ ಭೇಟಿ:

ಘಟನಾ ಸ್ಥಳದಲ್ಲಿ ಇರ್ಫಾನ್ ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿಯುತ್ತಿದ್ದಂತೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಹಾಗೂ ಡಿವೈಎಸ್ಪಿ ಮುರ್ತುಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!