LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ನೂತನ ಎಸ್‌ಪಿಯಾಗಿ ಕುಶಾಲ್ ಚೌಕ್ಸೆ ನೇಮಕ: ರಂಜಿತ್ ಕುಮಾರ್ ಬಂಡಾರು ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಹುದ್ದೆಗಳ ಸ್ಥಳಬದಲಾವಣೆ ನಡೆದಿದ್ದು, ಚಿತ್ರದುರ್ಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ಅವರನ್ನು ನೇಮಕ ರಾಜ್ಯ ಸರ್ಕಾರ ಬುಧವಾರ (ಸೆಪ್ಟೆಂಬರ್ 23, 2026) ಅಧಿಕೃತ ಆದೇಶ ಹೊರಡಿಸಿದೆ.

ಬೆಂಗಳೂರಿನಿಂದ ಕೋಟೆನಾಡಿಗೆ ನಿಯೋಜನೆ:

2018ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಕುಶಾಲ್ ಚೌಕ್ಸೆ (Kushal Chouksey) ಅವರು ಇದುವರೆಗೂ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ - Administration) ಸೇವೆ ಸಲ್ಲಿಸುತ್ತಿದ್ದರು. ಇದೀಗ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ವರ್ಗಾಯಿಸಿ, ಮುಂದಿನ ಆದೇಶದವರೆಗೆ ಹುದ್ದೆಯಲ್ಲಿ ಮುಂದುವರಿಯಲು ಸೂಚಿಸಲಾಗಿದೆ.

ರಂಜಿತ್ ಕುಮಾರ್ ಬಂಡಾರು ವರ್ಗಾವಣೆ:

ಚಿತ್ರದುರ್ಗ ಜಿಲ್ಲಾ ಎಸ್‌ಪಿಯಾಗಿದ್ದ ರಂಜಿತ್ ಕುಮಾರ್ ಬಂಡಾರು (Ranjit Kumar Bandaru) ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಕುಶಾಲ್ ಚೌಕ್ಸೆ ಅವರ ನಿಯೋಜನೆಯಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ರಾಜ್ಯಪಾಲರ ಆದೇಶದ ಮೇರೆಗೆ ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ. 

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

news_1790167941_0_926.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!